ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ
ಉಪ ಪಂಗಡಗಳು ಒಟ್ಟಾಗಲು ಕರೆ, ತಂದೆಯ ರೀತಿಯಲ್ಲಿ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುತ್ತೇನೆ: ವಿಜಯೇಂದ್ರ
Team Udayavani, Jan 15, 2025, 3:59 AM IST
ಬೆಂಗಳೂರು: ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯುವ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಇಡೀ ವೀರಶೈವ ಲಿಂಗಾಯತ ಸಮುದಾಯ ಎಚ್ಚೆತ್ತು ಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ನೊಳಂಬ ಲಿಂಗಾಯತ ಸಂಘ ಮಂಗಳವಾರ ಹಮ್ಮಿಕೊಂಡಿದ್ದ ಶ್ರೀಗುರು ಸಿದ್ಧರಾಮೇಶ್ವರರ 852ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿ ನಮ್ಮ ಸಮಾಜ ಕವಲು ದಾರಿಯಲ್ಲಿ ಸಾಗುತ್ತಿರುವ ವೇಳೆ ಸಮಾಜ-ಸಮಾಜಗಳ ನಡುವೆ ವಿಷ ಬೀಜ ಬಿತ್ತುವ ಮುಖೇನ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವಂತ ದುಷ್ಕೃತ್ಯಗಳು ನಡೆಯುತ್ತಿವೆ.
ವೀರಶೈವ ಲಿಂಗಾಯ ಸಮುದಾಯದ ಎಲ್ಲ ಉಪ ಪಂಗಡಗಳು ಕೂಡ ಒಗ್ಗಟ್ಟಾಗಬೇಕು. ಪಕ್ಕದ ಮನೆಗೆ ಬೆಂಕಿ ಹಚ್ಚಿದರೂ ನಮ್ಮ ಮನೆಗೆ ಬೆಂಕಿ ಹಚ್ಚಿಲ್ಲ ಎಂದು ಕಣ್ಮುಚ್ಚಿ ಕುಳಿತುಕೊಂಡಿದ್ದೇವೆ. ವೀರಶೈವ ಲಿಂಗಾಯತ ಸಮಾಜಗಳು ತಮ್ಮ, ತಮ್ಮ ಸಮಸ್ಯೆಗಳನ್ನು ಬದಿಗಿಟ್ಟು ಕೇವಲ ರಾಜಕೀಯ ಕಾರಣಕ್ಕೆ ಅಷ್ಟೇ ಅಲ್ಲ ಈ ನಾಡಿನ ಅಭಿವೃದ್ದಿ, ಏಳ್ಗೆ ದೃಷ್ಟಿಯಿಂದ ಒಗ್ಗಟ್ಟಾಗಬೇಕಾಗಿದೆ ಎಂದರು.
ಎಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವೆ:
ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಆಡಳಿತ ಅವಧಿಯಲ್ಲಿ ಎಲ್ಲ ಸಮುದಾಯಕ್ಕೂ ಕೊಡುಗೆ ನೀಡಿದ್ದಾರೆ. ಸಮುದಾಯದ ಶ್ರೀಗಳು ಸೇರಿದಂತೆ ಶಿಕಾರಿಪುರ ಕ್ಷೇತ್ರದ ಜನತೆ ಆಶೀರ್ವಾದದಿಂದಾಗಿ ಶಾಸಕನಾಗಿ, ಬಿಜೆಪಿ ರಾಜ್ಯಾಧ್ಯಕ್ಷನಾಗಿದ್ದೇನೆ. ಏನೇ ಅಡೆತಡೆ ಬಂದರೂ ಎಲ್ಲವನ್ನೂ ಮೆಟ್ಟಿನಿಂತು ಯಡಿಯೂರಪ್ಪ ಅವರು ಯಾವ ರೀತಿಯಲ್ಲಿ ರಾಜಕಾರಣ ಮಾಡಿದರೋ ಅದೇ ರೀತಿಯಲ್ಲಿ ಎಲ್ಲ ಸಮಸ್ಯೆಗಳನ್ನು ಮೆಟ್ಟಿನಿಂತು ಸಮಾಜದ ದ್ವನಿಯಾಗಿ ಕೆಲಸ ಮಾಡುತ್ತೇನೆ. ಇಡೀ ವೀರಶೈವ ಲಿಂಗಾಯ ಸಮುದಾಯ ಹೆಮ್ಮೆಯಿಂದ ಕಾಣುವ ನಿಟ್ಟಿನಲ್ಲಿ ದುಡಿಯುತ್ತೇನೆ ಎಂದು ತಿಳಿಸಿದರು.
1 ದಿನದ ಆಚರಣೆಗೆ ಸೀಮಿತವಾಗಬಾರದು:
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಸಾಧಕರ ಜಯಂತಿಗಳು ಒಂದು ದಿನ ಆಚರಣೆಗಳಿಗೆ ಸೀಮಿತವಾಗಬಾರದು. ಸಾಧು-ಶರಣರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳಡಿಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ, ಗೋಡೇಕೆರೆ ಶ್ರೀ ಮೃತ್ಯುಂಜಯ ದೇಶೀ ಕೇಂದ್ರ ಶ್ರೀಗಳು, ಪರಮಪೂಜ್ಯ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಶ್ರೀಗಳು, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು, ನೊಳಂಬಲಿಂಗಾಯತ ಸಂಘದ ಅಧ್ಯಕ್ಷ ಬಿ.ಕೆ.ಚಂದ್ರಶೇಖರ್, ಶಾಸಕ ಗೋಪಾಲಯ್ಯ, ಜ್ಯೋತಿಗಣೇಶ್, ಎಸ್.ಆರ್. ವಿಶ್ವನಾಥ್, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮಾಜಿ ಶಾಸಕ ಡಿ.ಎಸ್.ಸುರೇಶ್, ಅಖೀಲ ಭಾರತ ಖೋಖೋ ಫೆಡರೇಷನ್ ಉಪಾಧ್ಯಕ್ಷ ಲೋಕೇಶ್ವರ್, ವೀರಶೈವ ವಿಧ್ಯಾಭಿವೃದ್ದಿ ಸಂಘದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ, ವೈ.ಎಸ್. ಸಿದ್ಧರಾಮೇಗೌಡ ಸೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?
Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?
Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ
MUST WATCH
ಹೊಸ ಸೇರ್ಪಡೆ
Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡ ʼದಾಸʼ
C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.