ಸಿದ್ದು, ದೇವೇಗೌಡರು ಪರಸ್ಪರ ಕಾಲೆಳೆಯುವುದರಲ್ಲಿ ಪೈಪೋಟಿಗೆ ಬಿದ್ದಿದ್ದಾರೆ: ಜೋಶಿ
Team Udayavani, Jun 22, 2019, 3:32 PM IST
ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರ ಬಿದ್ದುಹೋಗಬಹುದು ಎಂಬ ಅರ್ಥದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ ಹೆಸರಿಗೆ ಮಾತ್ರ ಸರ್ಕಾರ ಇದೆ. ಜೆಡಿಎಸ್, ಕಾಂಗ್ರೆಸ್ ನವರು ಪರಸ್ಪರ ಕಾಲೆಳೆಯುವುದರಲ್ಲಿ ಪೈಪೋಟಿಗೆ ಬಿದ್ದಿದ್ದಾರೆ. ಈ ಸರ್ಕಾರ ಬೇಗ ಬಿದ್ದು ಹೋದರೆ ಒಳ್ಳೆಯದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ, ದೇವೇಗೌಡ ಪರಸ್ಪರ ಕಾಲೆಳೆಯುವುದರಲ್ಲಿ ನಿರತರಾಗಿದ್ದಾರೆ. ರಾಜ್ಯದ ಜನರ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ರಾಜ್ಯದ ಜನರು ಶಾಸಕರನ್ನು ಐದು ವರ್ಷದ ಅವಧಿಗೆ ಆಯ್ಕೆ ಮಾಡಿದ್ದಾರೆ. ಈ ಸರ್ಕಾರ ಬಿದ್ದು ಹೋದರೆ ಬಿಜೆಪಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ.
ಇವಿಎಮ್ ಗಳ ಬಗ್ಗೆ ಸಿದ್ದರಾಮಯ್ಯ ಸಂಶಯ ವ್ಯಕ್ತಪಡಿಸಿದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು ದೇಶದ ಜನರು ಕೊಟ್ಟು ತೀರ್ಪು ಒಪ್ಪಿಕೊಳ್ಳಲು ಕಾಂಗ್ರೆಸ್ ಸಿದ್ಧವಿಲ್ಲ. ಮಾನಸಿಕವಾಗಿ ಸ್ಥಿಮಿತ ಕಳೆದು ಕೊಂಡು ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇಂತಹ ಆರೋಪ ದೇಶದ ಜನತೆಗೆ ಮಾಡುವ ಅಪಮಾನ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ನಾವು ಗೆದ್ದಿಲ್ಲ. ಈ ಹೇಳಿಕೆ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.