ಮುಂದಿನ ದಿನದಲ್ಲಿ ವಿಕ್ಟೋರಿಯಾ ಹಳೇ ಕಟ್ಟದಲ್ಲಿ “ಹೆಲ್ತ್ ಕೇರ್ ಮ್ಯೂಸಿಯಂ’
Team Udayavani, Feb 4, 2020, 8:52 PM IST
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ “ಹೆಲ್ತ್ ಕೇರ್ ಮ್ಯೂಸಿಯಂ’ ಸ್ಥಾಪಿಸಿ ವೈದ್ಯಕೀಯ ಶಿಕ್ಷಣದ ಕನಸು ಕಾಣುವ ಎಲ್ಲ ವಿದ್ಯಾರ್ಥಿಗಳಿಗೆ ಇದು ಕಲಿಕಾ ತಾಣವಾಗಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದರು.
ಮಂಗಳವಾರ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸಾವಿರ ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡ ನಿರ್ಮಾಣವಾಗುತ್ತಿದ್ದು, ಆ ಬಳಿಕ ಹೊಸ ಕಟ್ಟಡದಲ್ಲಿ ಸೇವೆ ಆರಂಭಿಸಿದ ನಂತರ ವಿಕ್ಟೋರಿಯಾ ಆಸ್ಪತ್ರೆಯ ಹಳೆಯ ಕಲ್ಲು ಕಟ್ಟಡವನ್ನು ‘ಹೆಲ್ತ್ ಕೇರ್ ಮ್ಯೂಸಿಯಂ’ ಆಗಿ ಪರಿರ್ವತಿಸಲಾಗುವುದು.ಮ್ಯೂಸಿಯಂಯಲ್ಲಿ ಇಡಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಚಿತ್ರಣ ಕಟ್ಟಿಕೊಡಲಾಗುವುದು. ಹಿಂದಿನ ವೈದ್ಯಕೀಯ ತಂತ್ರಜ್ಞಾನ ಹಾಗೂ ಮುಂದಿನ ಆವಿಷ್ಕಾರಗಳ ಕುರಿತ ಮಾಹಿತಿ ಲಭ್ಯವಾಗಲಿದೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಮ್ಯೂಸಿಯಂನಲ್ಲಿ 1 ತಿಂಗಳ ತರಬೇತಿಗೆ ಅವಕಾಶ ಕಲ್ಪಿಸಲಾಗುತ್ತದೆ. ಇದಲ್ಲದೇ ವೈದ್ಯಕೀಯ ಶಿಕ್ಷಣದ ಕನಸು ಕಾಣುವ ಎಲ್ಲ ವಿದ್ಯಾರ್ಥಿಗಳಿಗೆ ಇದು ಕಲಿಕಾ ತಾಣವಾಗಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಕಲಿಕೆ ಹಾಗೂ ಪ್ರಯೋಗಕ್ಕೆ ಅನುಕೂಲವಾಗುವಂತೆ ಎಲ್ಲ 17 ಮೆಡಿಕಲ್ ಕಾಲೇಜುಗಳಿಗೆ ಸ್ಕಿಲ್ ಲ್ಯಾಬ್ ವ್ಯವಸ್ಥೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸ್ಕಿಲ್ ಲ್ಯಾಬ್ ವ್ಯವಸ್ಥೆ ರೋಗಿಗಳು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಬಹಳ ಮುಖ್ಯವಾಗುತ್ತದೆ.
ವಿದ್ಯಾರ್ಥಿಗಳು ನೇರವಾಗಿ ರೋಗಿಗಳ ಮೇಲೆ ಪ್ರಯೋಗ ಮಾಡುವುದಿಕ್ಕಿಂತ ಸ್ಕಿಲ್ ಲ್ಯಾಬ್‌ಗಳಲ್ಲಿ ಮ್ಯಾನಿಕ್ವಿನ್ಸ್ ಮೇಲೆ ಪ್ರಯೋಗ ನಡೆಸಿ, ಕಲಿಕೆಯ ಗುಣಮಟ್ಟ ಹೆಚ್ಚಿಸಿಕೊಳ್ಳಬಹುದು. ಮುಂದುವರಿದ ರಾಷ್ಟ್ರಗಳಲ್ಲಿ ಇರುವಂಥ ವ್ಯವಸ್ಥೆವು ಈಗಾಗಗಲೇ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇರುವುದು ಸಂತಸದ ವಿಷಯ ಎಂದರು.
ದುರಸ್ಥಿಗೆ ಸೂಚನೆ
ಆಸ್ಪತ್ರೆಗೆ ಬರುವ ರಸ್ತೆಯನ್ನು ದುರಸ್ಥಿಗೊಳಿಸಲು ಬಿಬಿಎಂಪಿಗೆ ಈ ಕೂಡಲೇ ಆದೇಶಿಸುತ್ತೇನೆ. ಜತೆಗೆ, ಆಸ್ಪತ್ರೆ ಒಳಗಿನ ಪಾದಚಾರಿ ರಸ್ತೆಯನ್ನು ಸರಿಪಡಿಸಿ ಕ್ಯಾಂಪಸನಲ್ಲಿ ಸುಲಭವಾಗಿ ಓಡಾಡುವಂತಾಗಬೇಕು. ಎಲ್ಲ ಅಗತ್ಯ ಸೌಲಭ್ಯ ಕಲ್ಪಿಸುವ ಮೂಲಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ವಿಶ್ವಾಸ, ನೆಮ್ಮದಿಯ ವಾತಾವರಣ ಸೃಷ್ಟಿಸಿ, ಉತ್ತಮ ಆರೋಗ್ಯ ಸೇವೆ ಒದಗಿಸಲು ಸೂಚಿಸಿದ್ದೇನೆ.
ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆ ಆಗಬೇಕು. ಕ್ಯಾಂಪಸ್ ಒಳಗೆ ಯಾವುದೇ ವಾಹನ ಬರಬಾರದು. ವೈದ್ಯರು, ಸಚಿವರು, ಶಾಸಕರು ಸೇರಿದಂತೆ ಯಾರ ವಾಹನವೂ ಕ್ಯಾಂಪಸ್ ಒಳಗೆ ಬರಬಾರದು. ಅದಕ್ಕಾಗಿ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿಯೇ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಅವ್ಯಸ್ಥೆಗೆ ಅಸಮಾಧಾನ
ಆಸ್ಪತ್ರೆಯ ರಕ್ತನಿಧಿ ಕೇಂದಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಹಳೆಯ ಬೋರ್ಡ್ ದುಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲಿನ ಅಧಿಕಾರಿಗಳಿಗೆ “ಸರ್ಕಾರಿ ಆಸ್ಪತ್ರೆ ಬಗ್ಗೆ ಇರುವ ಧೋರಣೆ ಹೋಗಲಾಡಿಸಿ. ರಕ್ತದ ಮಾದರಿ ಸಂಗ್ರಹಿಸಿ ಅದನ್ನು ಸಂಸ್ಕರಿಸುವ ವ್ಯವಸ್ಥೆ ಹೆಚ್ಚು ಮಾಡಿ’ ಎಂದು ಸೂಚಿಸಿದರು. ಬಳಿಕ ವಾರ್ಡ್‌ಗಳಿಗೆ ತೆರಳಿ ರೋಗಿಗಳು ಹಾಗೂ ಅವರ ಕುಟುಂಬದವರನ್ನು ಭೇಟಿ ಮಾಡಿ ಕುಂದುಕೊರತೆ ವಿಚಾರಿಸಿದರು. ಪರೀûಾಲಯಗಳಿಗೂ ಭೇಟಿ ನೀಡಿ ಅಲ್ಲಿ ವ್ಯವಸ್ಥೆಯನ್ನು ಪರಿಶೀಲಿಸಿದರು.
ಶಿಸ್ತಿನ ಪಾಠ
ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ದಾಡಿ ಬಿಟ್ಟಿದ್ದ ವಿದ್ಯಾರ್ಥಿಗಳಿಗೆ “ಮೆಡಿಕಲ್ ವಿದ್ಯಾರ್ಥಿಗಳು ಕ್ಲೀನ್ ಶೇವ್ ಮಾಡ್ಕೊಂಡು, ಶಿಸ್ತಿನಿಂದ ಇರಬೇಕು’ ಎಂದು ಶಿಸ್ತಿನ ಪಾಠ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.