ವಿದ್ಯಾರ್ಥಿಗಳಿಗೆ “ವಿಜಯೀಭವ’ ಚಾನೆಲ್
Team Udayavani, Mar 7, 2020, 6:30 AM IST
ಬೆಂಗಳೂರು: ಶಿಕ್ಷಣ ಕ್ಷೇತ್ರಕ್ಕೆ ಇನ್ನಷ್ಟು ಉತ್ತಮ ಯೋಜನೆಗಳನ್ನು ರೂಪಿಸುವ ಮೂಲಕ ಸುಶಿಕ್ಷಿತ, ಸುಭಿಕ್ಷ ಸಮಾಜ ನಿರ್ಮಾಣಕ್ಕೆ ಶ್ರಮಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ “ವಿಜಯೀಭವ’ ಯೂಟ್ಯೂಬ್ ಚಾನಲ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ವಿದ್ಯಾರ್ಥಿಗಳಿಗೆ ಚಾರಿತ್ರ್ಯ ನಿರ್ಮಾಣದ ಜತೆಗೆ ಉದ್ಯೋಗಾವಕಾಶಕ್ಕೆ ಅವಶ್ಯವಿರುವ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.
ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯನ್ನು ತಂತ್ರಜ್ಞಾನದ ನೆರವಿನಿಂದ ಸಮರ್ಥವಾಗಿ ನಿರ್ವಹಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ರಾಜ್ಯದ ಉನ್ನತ ಶಿಕ್ಷಣದ ನಿವ್ವಳ ನೋಂದಣಿ ಅನುಪಾತವನ್ನು ಹೆಚ್ಚಿಸಲು ಇಂಟರ್ ಆ್ಯಕ್ಟೀವ್ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಅವಶ್ಯವಿರುವ ಗುಣಾತ್ಮಕ ಇ-ಕಂಟೆಂಟ್ ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು.
“ಮೈತ್ರಿ’ ಸಹಾಯವಾಣಿ: ವಿದ್ಯಾರ್ಥಿಗಳ ಸಮಸ್ಯೆ ಗಳ ನ್ನು ಆಲಿಸಲು “ಮೈತ್ರಿ’ ಸಹಾಯವಾಣಿ ಪ್ರಾರಂಭಿಸ ಲಾಗಿದೆ. ಆ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ವೈಯಕ್ತಿಕ ಸಮಸ್ಯೆಗಳ ಕುರಿತು ಮಾರ್ಗದರ್ಶನ ಪಡೆಯಬಹುದಾಗಿದೆ. ವಿದ್ಯಾರ್ಥಿಗಳಿಗಾಗಿ “ವಿಜಯೀಭವ’ ಎಂಬ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಲಾಗುತ್ತಿದೆ. ಇದರ ಮೂಲಕ ಯುವಜನರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸ್ಫೂರ್ತಿ ನೀಡಲು ಉತ್ತಮ ವೇದಿಕೆ ಸೃಷ್ಟಿಸಿದಂತಾಗಿದೆ. ಈ ಎಲ್ಲ ಪ್ರಯತ್ನಗಳನ್ನೂ ಶಿಕ್ಷಣ ಇಲಾಖೆ ನಿರಂತರವಾಗಿ ಮುಂದುವರಿಸಿಕೊಂಡು ಹೋಗಬೇಕು.
ಆ ಮೂಲಕ ವಿದ್ಯಾರ್ಥಿಗಳ ಬದುಕಿನಲ್ಲಿ ಪರಿವರ್ತನೆ ತರಬೇಕು ಎಂದು ಯಡಿಯೂರಪ್ಪ ಸಲಹೆ ನೀಡಿದರು. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ. 29 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನಿಗದಿಪಡಿಸಿದ್ದೇವೆ. ಉನ್ನತ ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಎಂದು ಅವರು ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜು ಮೇಲ್ದರ್ಜೆಗೆ: ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಬೋಧಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕ ಪಾರದರ್ಶಕವಾಗಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಗೆ ಅವಕಾಶ ದೊರೆಯುವುದಲ್ಲದೆ, ಶಿಕ್ಷಣದ ಗುಣಮಟ್ಟ ಹೆಚ್ಚಲೂ ಸಾಧ್ಯವಾಗುತ್ತದೆ. ಬೆಂಗಳೂರಿನಲ್ಲಿರುವ ಐತಿಹಾಸಿಕ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐಐಟಿ ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ ಎಂಬ ಮಾಹಿತಿ ನೀಡಿದರು.
ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿ ಜಿಯೋ ಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾ ಗುವುದು ಎಂದು ಯಡಿಯೂರಪ್ಪ ಹೇಳಿದರು. ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.
ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ. 29 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ನಿಗದಿಪಡಿಸಿದ್ದೇವೆ. ಉನ್ನತ ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ.
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.