ಕೋವಿಡ್ ನಿಯಂತ್ರಣ, ಪರಿಹಾರ ಒದಗಿಸುವಲ್ಲಿ ಕೇಂದ್ರ, ರಾಜ್ಯ ಸರಕಾರಗಳು ವಿಫಲ : ಸೊರಕೆ ಆರೋಪ 

Team Udayavani, May 14, 2021, 7:30 PM IST

ಕೋವಿಡ್ ನಿಯಂತ್ರಣ, ಪರಿಹಾರ ಒದಗಿಸುವಲ್ಲಿ ಕೇಂದ್ರ, ರಾಜ್ಯ ಸರಕಾರಗಳು ವಿಫಲ : ಸೊರಕೆ ಆರೋಪ 

ಕಾಪು : ಕೋವಿಡ್ ಎರಡನೇ ಅಲೆಯ ತೀವ್ರತೆಯ ಬಗ್ಗೆ ತಜ್ಞರ ವರದಿ ಹಾಗೂ ಸಲಹೆ ಸೂಚನೆಯಂತೆ ಸಿದ್ಧತೆ ಮಾಡಿಕೊಳ್ಳದೇ ಅಸಡ್ಡೆ ತೋರಿಸಿ, ಸಹಸ್ರಾರು ಜನರ ಸಾವಿಗೆ ಕಾರಣವಾಗಿರುವ ಮತ್ತು ಜನರನ್ನು ದುಸ್ಥಿತಿಗೆ ತಳ್ಳಿರುವ ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯವೈಖರಿಯಿಂದಾಗಿ ವಿಶ್ವದಾದ್ಯಂತ ಭಾರತ ತಲೆತಗ್ಗಿಸುವಂತಾಗಿದೆ ಎಂದು ಮಾಜಿ ಸಚಿವ  ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.

ಆಸ್ಪತ್ರೆಗಳಲ್ಲಿ ಹಾಸಿಗೆ ಇಲ್ಲ, ಆಮ್ಲಜನಕ ಇಲ್ಲ, ವೆಂಟಿಲೇಟರ್ ಇಲ್ಲ, ವ್ಯಾಕ್ಸಿನ್ ಇಲ್ಲ, ಔಷದಿ ಇಲ್ಲ, ಆಂಬ್ಯುಲೆನ್ಸ್ ಇಲ್ಲ ಒಟ್ಟಾರೆ ಕೋವಿಡ್ ನಿರ್ವಹಣೆಗೆ ಯಾವುದು ಅತ್ಯಗತ್ಯವೋ ಅದ್ಯಾವುದೂ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಆಡಳಿತಾರೂಢ ಸರಕಾರಗಳೇ ಪ್ರಮುಖ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರಕಾರಗಳ ಅಸಡ್ಡೆಯನ್ನು ಮನಗಂಡು ಮೂಕಪ್ರೇಕ್ಷಕನಾಗಿರಲು ಬಯಸದ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಮಧ್ಯಸ್ಥಿಕೆ ವಹಿಸಿ ತಜ್ಞರು ಮತ್ತು ಅನುಭವಿ ವೈದ್ಯರನ್ನೊಳಗೊಂಡ ಟಾಸ್ಕ್ ಫೋರ್ಸ್ ರಚಿಸಿ ಕಾರ್ಯಪ್ರವೃತ್ತರಾಗುವಂತೆ ನಿರ್ದೇಶನ ನೀಡಿದ್ದರೂ ನ್ಯಾಯಾಲಯದ ಆದೇಶವನ್ನು ಅರಗಿಸಿಕೊಳ್ಳಲಾಗದೆ, ಬಾಲಿಶವಾಗಿ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಸಂಸದ ಹಾಗೂ ಕೇಂದ್ರ ಮಂತ್ರಿ ಮಂಡಲದ ಹಿರಿಯ ಸಚಿವ ಡಿ.ವಿ. ಸದಾನಂದ ಗೌಡ ಅವರು ನಾವೇನು ನೇಣುಹಾಕಿಕೊಂಡು ಸಾಯಬೇಕಾ ಎಂದು ಕೇಳಿದರೆ, ರಾಜ್ಯದ ಮತ್ತೊಬ್ಬ ಮಹಾನ್ ಬಿಜೆಪಿ ನಾಯಕ / ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರು ನ್ಯಾಯಾಧೀಶರನ್ನೇ ಅಣಕಿಸಿ ಮಾತನಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮತ್ತು ನ್ಯಾಯಾಂಗ ನಿಂದನೆ ಎಸಗಿದ್ದಾರೆ ಎಂದು ಸೊರಕೆ ಆರೋಪಿಸಿದ್ದಾರೆ.

ಇದನ್ನೂ ಓದಿ : ಚಂಡ ಮಾರುತ ಭೀತಿ : ಕರಾವಳಿಯಲ್ಲಿ ವಿಸ್ತಾರಗೊಂಡ‌ ಕಡಲು ; ತೀರ ವಾಸಿಗಳಲ್ಲಿ ಆತಂಕ

ಸಂವಿಧಾನ ಬಧ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವ ಜನಪ್ರತಿನಿಧಿಗಳು ತಮ್ಮ ಹೊಣೆಗಾರಿಕೆಯನ್ನು ಮರೆತು ರಾಜ್ಯದ ಮತ್ತು ಜನರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲರಾಗಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನದ ಸಲುವಾಗಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೇಂದ್ರ ಸಚಿವ ಸದಾನಂದ ಗೌಡ ಅವರು ತಾವು ನೇಣಿಗೆ ಶರಣಾಗುವ ಬದಲು ತಮ್ಮ ಸಂಸದ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜನರಿಗೆ ಶರಣಾಗುವುದು ಒಳಿತು ಹಾಗೂ ಶಾಸಕ ಸಿ. ಟಿ. ರವಿಯವರು ನ್ಯಾಯಾಧೀಶರ ಬಗ್ಗೆ ನೀಡಿರುವ ಹೇಳಿಕೆಯು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಯೋಗ್ಯವಾಗಿರುವುದರಿಂದ ತಮ್ಮ ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕೆಂದು ವಿನಯ್ ಕುಮಾರ್ ಸೊರಕೆ ಆಗ್ರಹಿಸಿದ್ದಾರೆ.

ಪ್ರಸಕ್ತ ಸಂದಿಗ್ಧ ಪರಿಸ್ಥಿತಿಯಲ್ಲಿ ಸೋಂಕಿತರ ಶುಶ್ರೂಷೆಗೆ ಸ್ಪಂದಿಸಿ ಅಗತ್ಯವಿರುವ ಔಷಧಿಗಳು, ಆಮ್ಲಜನಕ, ವೆಂಟಿಲೇಟರ್ ಗಳನ್ನು ಪೂರೈಸುವಲ್ಲಿ ಎಡವಿರುವ ಸರಕಾರ ರೈತರಿಗೆ ಅಗತ್ಯವಿರುವ ರಸಗೊಬ್ಬರದ ಬೆಲೆಯನ್ನು ಏರಿಸುವುದರೊಂದಿಗೆ ಗಾಯದ ಮೇಲೆ ಬರೆ ಎಳೆದಂತೆ ತನ್ನ ಜನವಿರೋಧಿ ಧೋರಣೆಯನ್ನು ಮುಂದುವರಿಸಿದ್ದು, ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡು ಆದಾಯವಿಲ್ಲದೆ ಒಪ್ಪೊತ್ತಿನ ಊಟಕ್ಕೆ ಪರದಾಡುತ್ತಿರುವ ದಿನಗೂಲಿ ಕಾರ್ಮಿಕರಿಗೆ ಯಾವುದೇ ರೀತಿಯ ಪರ್ಯಾಯ ವ್ಯವಸ್ಥೆ ಯನ್ನು ಕಲ್ಪಿಸದೇ ಬಡವರ ವಿರೋಧಿಯಾಗಿ ವರ್ತಿಸುತ್ತಿರುವುದು ಖಂಡನೀಯವಾಗಿದೆ.

ಮಹಾಮಾರಿ ಕೊರೊನಾ ಸೋಂಕಿನ ಎರಡನೇ ಅಲೆಯಿಂದಾಗಿ ಇಡೀ ವಿಶ್ವವೇ ತತ್ತರಿಸಿ ಹೋಗಿದ್ದು ಆಯಾ ದೇಶದ ಆಡಳಿತಾರೂಢ ಸರಕಾರಗಳು ಸಮಯ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆಯನ್ನು ಮೆರೆದು ಕಾರ್ಯಪ್ರವೃತ್ತರಾದುದರಿಂದ ಚೇತರಿಸಿಕೊಂಡಿದ್ದರೆ ನಮ್ಮ ದೇಶದ ಸ್ಥಿತಿ ಮಾತ್ರ ದಿನದಿಂದ ದಿನಕ್ಕೆ. ಅಧೋಗತಿಯತ್ತ ಸಾಗುತ್ತಿದೆ. ಸರಕಾರದ ಹೊಣೆಗೇಡಿತನದ ನೀತಿಗಳಿಂದಾಗಿ ಜನ ಜೀವನ ತತ್ತರಿಸಿ ಹೋಗಿದ್ದು ಒಂದು ಕ್ಷಣವೂ ಸರಕಾರ ಅಧಿಕಾರದಲ್ಲಿರಲು ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಹಾಗಾಗಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಿ ತಮ್ಮ ಹುದ್ದೆಗಳಿಂದ ಕೆಳಗಿಳಿದು ದೇಶ ಮತ್ತು ದೇಶದ ಜನರ ಪ್ರಾಣವನ್ನು ಉಳಿಸುವಂತೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.