ರಷ್ಯಾ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಯೇ ಪುಟಿನ್‌ ?

ಪಾರ್ಕಿನ್ಸನ್‌ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ವದಂತಿ, ಗೆಳತಿ, ಪುತ್ರಿಯರಿಬ್ಬರಿಂದ ಹುದ್ದೆ ತ್ಯಜಿಸುವಂತೆ ಒತ್ತಾಯ

Team Udayavani, Nov 6, 2020, 3:42 PM IST

ರಷ್ಯಾ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಯೇ ಪುಟಿನ್‌ ?

ಮಾಸ್ಕೋ: ಇತ್ತೀಚೆಗಷ್ಟೇ ಅನಾರೋಗ್ಯ ನಿಮಿತ್ತ ದಾಖಲೆಯ ಅವಧಿಗೆ ಜಪಾನ್‌ ಪ್ರಧಾನಮಂತ್ರಿಯಾಗಿದ್ದ ಶಿಂಜೋ ಅಬೆ ಹುದ್ದೆ ತ್ಯಜಿಸಿದ್ದರು. ಇದೀಗ ಪಾರ್ಕಿನ್ಸನ್‌ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕೂಡ 2021ರ ಜನವರಿ ವೇಳೆಗೆ ಹುದ್ದೆ ತ್ಯಜಿಸುವ ಸಾಧ್ಯತೆಗಳಿವೆ. ಕಾಯಿಲೆಯ ಕಾರಣದಿಂದಲೇ 68 ವರ್ಷದ ಪುಟಿನ್‌ ಹುದ್ದೆ ತ್ಯಜಿಸಬೇಕು ಎಂದು ಅವರ ಗೆಳತಿ ಅಲೆನಾ ಕಬಯೇವಾ ಮತ್ತು ಇಬ್ಬರು ಪುತ್ರಿಯರನ್ನು ಒತ್ತಾಯಿಸುತ್ತಿದ್ದಾರೆ ಎಂದು ರಷ್ಯಾ ಸಂಸತ್‌, “ಕ್ರೆಮ್ಲಿನ್‌’ ಮೂಲಗಳನ್ನು ಉಲ್ಲೇಖೀಸಿ “ದ ಸನ್‌’ ಪತ್ರಿಕೆ ವರದಿ ಮಾಡಿದೆ.

ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ನೋವು ಕಾಡುತ್ತಿದ್ದು, ಕಾಲುಗಳನ್ನು ಸತತವಾಗಿ ಚಲನಾ ಸ್ಥಿತಿಯಲ್ಲಿ ಇರಿಸುತ್ತಿದ್ದಾರೆ. ಜತೆಗೆ ಕುರ್ಚಿಯ ಕೈಗಳನ್ನು ಹಿಡಿಯುವ ವೇಳೆ ಅವರಿಗೆ ನೋವು ಉಂಟಾಗುತ್ತಿರುವ ಅಂಶ ವಿಡಿಯೋದಲ್ಲಿ ದಾಖಲಾಗಿರುವುದನ್ನು ವಿಶ್ಲೇಷಕರು ಅವರಿಗೆ ಪಾರ್ಕಿನ್ಸ್‌ ಕಾಯಿಲೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮುನಿರತ್ನ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಿಲ್ಲ: ಡಿಕೆ ಸುರೇಶ್ ಯೂಟರ್ನ್

ಹೀಗಾಗಿ, ಸ್ಟಾಲಿನ್‌ ಬಳಿಕ ಅತ್ಯಧಿಕ ಸಮಯದ ವರೆಗೆ ರಷ್ಯಾದ ನೇತೃತ್ವ ವಹಿಸಿರುವ ಹೆಗ್ಗಳಿಕೆಗೆ ಪಾತ್ರರಾಗಿರುವ ಪುಟಿನ್‌ ಜನವರಿಯಲ್ಲಿ ಪದತ್ಯಾಗ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರ ಅನಾರೋಗ್ಯದ ಬಗ್ಗೆ ಸರ್ಕಾರದ ವತಿಯಿಂದ ಹೇಳಿಕೆ ಹೊರಬಿದ್ದಿಲ್ಲ.

ಇತ್ತೀಚೆಗಷ್ಟೇ ಜೀವಿತಾವಧಿವರೆಗೆ ಅಧ್ಯಕ್ಷರಾಗಿರುವ ಬಗ್ಗೆ ಮತ್ತು ಸರ್ಕಾರದ ವತಿಯಿಂದ ಎಲ್ಲ ವೆಚ್ಚವನ್ನು ಭರಿಸುವ ಕರಡು ವಿಧೇಯಕಕ್ಕೂ ಅನುಮೋದನೆ ನೀಡಿದ್ದರು.

ಮಾಸ್ಕೋದಲ್ಲಿನ ಪ್ರಮುಖ ರಾಜಕೀಯ ವಿಶ್ಲೇಷಕ ಪ್ರೊ.ವಲೆರಿ ಸೊಲೊವಿ ಪ್ರತಿಕ್ರಿಯೆ ನೀಡಿ, ಪುಟಿನ್‌ ಶೀಘ್ರದಲ್ಲಿಯೇ ಹೊಸ ಪ್ರಧಾನಮಂತ್ರಿಯನ್ನು ನೇಮಿಸಲಿದ್ದಾರೆ. ಅವರೇ ಮುಂದಿನ ದಿನಗಳಲ್ಲಿ ರಷ್ಯಾ ಅಧ್ಯಕ್ಷರಾಗುವಂತೆ ಪುಟಿನ್‌ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಹಿಂದೆ ಕೂಡ ಪುಟಿನ್‌ ಆರೋಗ್ಯದ ಬಗ್ಗೆ ಹಲವು ವದಂತಿಗಳು ಹಬ್ಬಿದ್ದವು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.