ಸ್ಥಳೀಯಾಡಳಿತ ಆಯ್ಕೆಗೆ ಇಂದು ಮತ ಚಲಾವಣೆ
ಮಂಗಳೂರು ಸಹಿತ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ
Team Udayavani, Nov 12, 2019, 6:30 AM IST
ಬೆಂಗಳೂರು: ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗಳ ಸಹಿತ ರಾಜ್ಯದ 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನ.12ರ ಮಂಗಳವಾರ ಮತದಾನ ನಡೆಯಲಿದೆ. ರಾಜ್ಯ ಚುನಾವಣ ಆಯೋಗ ಮತದಾನಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಂಡಿದೆ.
ರಾಜ್ಯದ 2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ ಮತ್ತು 3 ಪಟ್ಟಣ ಪಂಚಾಯತ್‌ಗಳ 418 ವಾರ್ಡ್‌ಗಳ ಪೈಕಿ 409 ವಾರ್ಡ್‌ಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ 1,388 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.
ಒಟ್ಟು 13.04 ಲಕ್ಷ ಮತದಾರರು ಮತ ಚಲಾ ಯಿಸಲಿದ್ದಾರೆ. 9 ಅಭ್ಯರ್ಥಿಗಳು ಈಗಾಗಲೇ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. 1,587 ಅಭ್ಯರ್ಥಿಗಳು ಕಣ ದಲ್ಲಿದ್ದಾರೆ. ನ.14ರಂದು ಮತ ಎಣಿಕೆ ನಡೆಯಲಿದೆ.
ವಿವಿಧ ಕಾರಣಗಳಿಂದ ತೆರವಾಗಿರುವ ಹಾಸನ ಜಿಲ್ಲೆ ಹೊಳೆನರಸೀಪುರ ಪುರಸಭೆಯ ವಾರ್ಡ್ ಸಂಖ್ಯೆ 4, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪುರಸಭೆಯ ವಾರ್ಡ್ ಸಂಖ್ಯೆ 19, ವಿಜಯಪುರ ಜಿಲ್ಲೆ ಚಡಚಣ ಪ.ಪಂ.ನ ವಾರ್ಡ್ ಸಂಖ್ಯೆ 5, ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಪುರಸಭೆಯ ವಾರ್ಡ್ ಸಂಖ್ಯೆ 17, ಕಲ ಬುರಗಿ ಜಿಲ್ಲೆ ಚಿತ್ತಾಪುರ ಪುರಸಭೆಯ ವಾರ್ಡ್ ಸಂಖ್ಯೆ 10ರ ಉಪ ಚುನಾವಣೆಗೂ ಮತದಾನ ನಡೆಯಲಿದೆ.
ಉಡುಪಿಯ ಬ್ರಹ್ಮಾವರ ತಾಲೂಕಿನ ಬಾಕೂìರು, ಚಾಮರಾಜನಗರ ಜಿಲ್ಲೆಯ ಹರದನಹಳ್ಳಿ ಜಿ.ಪಂ., ಯಳಂದೂರು ತಾಲೂಕಿನ ಯರಿಯೂರು ತಾ.ಪಂ., ಗದಗ ಜಿಲ್ಲೆ ಬಿಂಕದಕಟ್ಟಿ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜಮಲಾಪುರ ತಾ.ಪಂ. ಕ್ಷೇತ್ರ ಹಾಗೂ ವಿವಿಧ 213 ಗ್ರಾ.ಪಂ. ಸದಸ್ಯ ಸ್ಥಾನಗಳಿಗೂ ಮಂಗಳವಾರವೇ ಮತದಾನ ನಡೆಯಲಿದೆ.
“ಉದಯವಾಣಿ’ ಮನವಿ
ಸ್ಥಳೀಯಾಡಳಿತಗಳು ನಮಗೆ ಅತ್ಯಂತ ನಿಕಟವಾದ ಸರಕಾರಗಳು. ಅವುಗಳನ್ನು ಸಶಕ್ತವಾಗಿ ರೂಪಿಸುವ ಮತದಾನ ಪ್ರಕ್ರಿಯೆಯಲ್ಲಿ ನಾವು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವದ ಉಳಿವಿಗಾಗಿ ಕೈಜೋಡಿಸಿ. ನಿಮ್ಮ ಮತ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಕಾರಣವಾಗಿ, ಅಭಿವೃದ್ಧಿಗೆ ದಾರಿದೀಪವಾಗಬಲ್ಲದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.