Waqf Issue: ವಕ್ಫ್ ಕದನ: ರಾಜ್ಯಾದ್ಯಂತ ನ. 4ಕ್ಕೆ ಬಿಜೆಪಿಯಿಂದ ಹೋರಾಟ
ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಶಾಸಕರು, ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದ ರಾಜ್ಯಾಧ್ಯಕ್ಷ ಬಿ.ವೈ,ವಿಜಯೇಂದ್ರ
Team Udayavani, Oct 31, 2024, 7:25 AM IST
ಬೆಂಗಳೂರು: ವಕ್ಫ್ ವಿವಾದ ಹಿನ್ನೆಲೆಯಲ್ಲಿ ರೈತರನ್ನು ಒಕ್ಕಲೆಬ್ಬಿಸಬಾರದೆಂದು ಆಗ್ರಹಿಸಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿ ಮುಂದಾಗಿದ್ದು, ನ. 4ರಂದು ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.
ಪಕ್ಷದ ಎಲ್ಲ ಹಾಲಿ, ಮಾಜಿ ಶಾಸಕರು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ತತ್‌ಕ್ಷಣ ವಾಪಸ್ ಪಡೆಯಬೇಕು. ಯಾವುದೇ ರೈತರ ಭೂಮಿ ಕಬಳಿಸುವುದಕ್ಕೆ ಸರಕಾರ ಅವಕಾಶ ನೀಡಬಾರದು. ಈ ಹಿನ್ನೆಲೆಯಲ್ಲಿ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಬೃಹತ್ ಹೋರಾಟ ನಡೆಸಿ ಜಿಲ್ಲಾಧಿಕಾರಿ, ತಹಶೀಲ್ದಾರ್‌ಗೆ ಮನವಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಸರಕಾರದ ಈ ನಿರ್ಧಾರದ ವಿರುದ್ಧ ರೈತರು ಧ್ವನಿ ಎತ್ತಿದ್ದಾರೆ. ಹೀಗಾಗಿ ರೈತ ಸಮುದಾಯದ ಜತೆಗೆ ಬಿಜೆಪಿ ಗಟ್ಟಿಯಾಗಿ ನಿಲ್ಲಬೇಕಿದ್ದು, ಹೋರಾಟ ಯಶಸ್ವಿಯಾಗಿಸುವಂತೆ ಮನವಿ ಮಾಡಿದ್ದಾರೆ.
ಸಿಎಂ ನಿರ್ದೇಶನದ ಮೇರೆಗೆ ಆದೇಶ: ಬಿವೈವಿ
ಸಿಎಂ ಸಿದ್ದರಾಮಯ್ಯನವರ ಸೂಚನೆಯ ಮೇರೆಗೆ ರೈತರ ಭೂಮಿಯನ್ನು ವಕ್ಫ್ ಆಸ್ತಿ ಎಂದು ವಶಪಡಿಸಿಕೊಳ್ಳುವ ವಿಜಯಪುರ ಜಿಲ್ಲಾಧಿಕಾರಿಗಳ ಸಭೆಯ ನಡಾವಳಿಯಲ್ಲಿ ಉಲ್ಲೇಖೀಸಲಾಗಿದೆ ಎಂಬ ದಾಖಲೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ “ಎಕ್ಸ್’ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಸರಕಾರ ಈವರೆಗಿನ ಆಡಳಿತದಲ್ಲಿ ಸಂಕಟಕ್ಕೆ ಒಳಗಾದ ರೈತರಿಗಾಗಿ ಯಾವುದೇ ಪರಿಹಾರವನ್ನೂ ನೀಡಲಿಲ್ಲ. ರೈತ ಕಲ್ಯಾಣಕ್ಕಾಗಿ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಿಲ್ಲ. ಆದರೆ ಕಳೆದ ಕೆಲವು ದಿನಗಳಿಂದ ವಿಜಯಪುರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿಯ ಹೆಸರಿನಲ್ಲಿ ರೈತರ ಭೂಮಿಯನ್ನು ಆಕ್ರಮಿಸಿಕೊಳ್ಳಲು ಹೊರಟಿದೆ ಎಂದು ಆರೋಪಿಸಿದ್ದಾರೆ.
“ಬಿಜೆಪಿ ಅವಧಿಯಲ್ಲಿ ನಡೆದಿದ್ದರೂ ತಪ್ಪೇ. ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿ ನಮ್ಮ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು. ಅಂದು ನೋಟಿಸ್ ನೀಡಿರುವ ಬಗ್ಗೆ ನಮ್ಮ ಸರಕಾರದ ಪ್ರಮುಖರ ಗಮನಕ್ಕೆ ಬಂದಿಲ್ಲ. ಗಮನಕ್ಕೆ ಬಂದಿದ್ದರೆ ವಕ್ಫ್ ಮಂಡಳಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದ್ದೆವು.” – ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.