Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
ರಮೇಶ್ ಜಾರಕಿಹೊಳಿ, ಬಸನಗೌಡ ಯತ್ನಾಳ್ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಚುನಾವಣೆ ಅಂದರೆ ವಿಜಯೇಂದ್ರ ಅಲ್ಲ
Team Udayavani, Nov 5, 2024, 7:20 AM IST
ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪಿತೂರಿ, ಸಚಿವ ಜಮೀರ್ ಎನ್ನುವ ದೇಶದ್ರೋಹಿಯಿಂದ ರಾಜ್ಯದಲ್ಲಿ ರೈತರು, ದೇವಸ್ಥಾನ, ಮಠಮಾನ್ಯಗಳ ಜಮೀನು ಕಬಳಿಸುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ವಕ್ಫ್ ಕಾಯ್ದೆ ಬಳಸಿಕೊಂಡು ರೈತರ ಜಮೀನು ಕಬಳಿಸುವ ಯತ್ನ ನಡೆಯುತ್ತಿದೆ. ರಾಜ್ಯದಲ್ಲಿ ಯಾವ ಸರಕಾರ ಸಹ ಈ ರೀತಿಯ ಕೆಟ್ಟ ಕೆಲಸ ಮಾಡಿಲ್ಲ. ಜವಾಬ್ದಾರಿಯುತ ಸಚಿವ ಸ್ಥಾನದಲ್ಲಿ ಇದ್ದುಕೊಂಡು ಜಿಲ್ಲಾ ಪ್ರವಾಸ ಮಾಡುತ್ತಿರುವ ಸಚಿವ ಜಮೀರ್ ಜಿಲ್ಲಾಧಿಕಾರಿಗಳನ್ನು ಬೆದರಿಸಿ, ವಕ್ಫ್ ಆಸ್ತಿಯೆಂದು ರೈತರು, ದೇವಸ್ಥಾನ, ಮಠ ಮಾನ್ಯಗಳಿಗೆ ನೋಟಿಸ್ ಕೊಡಿಸುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಕಬಳಿಸುವ ಪ್ರಯತ್ನ ನಡೆಯುತ್ತಿದೆ ಎಂದರು.
ಸಿದ್ದರಾಮಯ್ಯಗೆ ನಾನು ನೇರ ಸವಾಲು ಹಾಕುತ್ತೇನೆ. ಅವರಿಗೆ ತಾಕತ್ತಿದ್ದರೆ ಕಾಂಗ್ರೆಸ್ ಪುಢಾರಿಗಳು ಕಬಳಿಸಿದ ವಕ್ಫ್ ಜಮೀನು ಮೊದಲು ವಾಪಸ್ ಪಡೆಯಬೇಕು. ಹತ್ತಾರು ವರ್ಷಗಳ ಕಾಲ ಜಮೀನಿನಲ್ಲಿ ಉಳುಮೆ ಮಾಡುವ ರೈತರ ಮೇಲೆ ದರ್ಪ ತೋರುವುದನ್ನು ಬಿಡಲಿ ಎಂದರು.
“ಪುಗ್ಸಟೆ ಮಾತನಾಡುವವರ ಆಟ ಬಹುದಿನ ನಡೆಯದು”
ಬಿ.ವೈ. ವಿಜಯೇಂದ್ರ ಇರುವವರೆಗೂ ಉಪಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ ಎಂದಿರುವ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಚುನಾವಣೆ ಅಂದರೆ ವಿಜಯೇಂದ್ರ ಅಲ್ಲ, ಕಾರ್ಯಕರ್ತರ ಹೋರಾಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದರು. ಉಪಚುನಾವಣೆಗಳು ನಡೆಯುತ್ತಿರುವ ಸಂಡೂರು, ಶಿಗ್ಗಾವಿ, ಚನ್ನಪಟ್ಟಣದಲ್ಲಿ ಕಾರ್ಯ ಕರ್ತರೇ ಪಕ್ಷ ವನ್ನು ಗೆಲ್ಲಿಸುತ್ತಾರೆ. ಪುಗ್ಸಟೆ ಮಾತನಾಡುವವರ ಆಟ ಬಹಳ ದಿನಗಳ ಕಾಲ ನಡೆಯದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.