Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
ಎಲ್ಲರಿಗೂ ಒಂದೇ ರೀತಿಯ ನ್ಯಾಯ ನೀಡಬೇಕು: ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ
Team Udayavani, Nov 10, 2024, 7:40 AM IST
ಗಜೇಂದ್ರಗಡ: ರಾಜ್ಯದಲ್ಲಿ ರೈತರು ಹಾಗೂ ದೇವಸ್ಥಾನದ ಜಮೀನುಗಳ ಮೇಲೆ ವಕ್ರದೃಷ್ಟಿ ಬೀರಿರುವ ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಾತೀತವಾಗಿ ಶ್ರಮಿಸಬೇಕಿದೆ ಎಂದು ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.
ಗಜೇಂದ್ರಗಡದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಸ್ಯೆ ಸರಿ ಮಾಡಬೇಕಾದರೆ ಮೊದಲು ಏಕರೂಪ ನಾಗರಿಕ ಸಂಹಿತೆ ಬರಬೇಕು. ಎಲ್ಲರಿಗೂ ಒಂದೇ ರೀತಿಯ ನ್ಯಾಯ ನೀಡಬೇಕು. ವಕ್ಫ್‌ಗೊಂದು ನ್ಯಾಯ ಬೇರೆಯವರಿಗೊಂದು ನ್ಯಾಯ ಮಾಡಬಾರದು ಎಂದರು.
ಯಾರದ್ದೋ ಆಸ್ತಿ ಯಾರೋ ಕಬಳಿಸುವಂಥದ್ದು ದುರಂತ. ವಕ್ಫ್ ಬೋರ್ಡ್ ಅಸಂಬದ್ಧತೆ ನಿರ್ಮಾಣ ಮಾಡಿ ಯಾರದ್ದೋ ಜಾಗ ವಶಪಡಿಸಿಕೊಳ್ಳುವಂಥದ್ದು ಸರಿಯಾದ ಕ್ರಮವಲ್ಲ. ಹೀಗಾಗಿ ಎಲ್ಲರೂ ಒಗ್ಗೂಡಿ ಪಕ್ಷಭೇದ-ಜಾತಿಭೇದ ಮರೆತು ವಕ್ಫ್ ಬೋರ್ಡ್ ರದ್ದತಿಗೆ ಹೋರಾಡಬೇಕಿದೆ. ಈಚೆಗೆ ಹೈದರಾಬಾದ್‌ನಲ್ಲಿ ಅಲ್ಲಿನ ಪ್ರಾಣದೇವರನ್ನು ವಕ್ಫ್ ಗೆ ಸೇರ್ಪಡೆ ಮಾಡಿದ್ದಾರೆ. ಇದು ದೊಡ್ಡ ಅನ್ಯಾಯ ಎಂದು ಹೇಳಿದರು.
ರಾಜಕೀಯವಾಗಿ ಇಂತಹ ನಿಲುವುಗಳನ್ನು ತಾಳುವ ಪಕ್ಷಗಳಿಗೆ ನಮ್ಮ ವಿರೋಧವಿದೆ. ವಕ್ಫ್ ಬೋರ್ಡ್ ತೆಗೆದುಹಾಕಲು ನಾವೆಲ್ಲರೂ ಸೇರಬೇಕು. ದೇವರಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮಾಡಬೇಕಿದೆ. ವಕ್ಫ್ ಬೋರ್ಡ್ ಕ್ರಮವನ್ನು ತೀವ್ರವಾಗಿ ವಿರೋಧ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.