Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
35ಕ್ಕೂ ಹೆಚ್ಚು ಸ್ವಾಮೀಜಿಗಳ ಸಾಥ್, ವಕ್ಫ್ ಕುರಿತ ಎಲ್ಲ ಗೆಜೆಟ್ ರದ್ದು ಮಾಡಲು ಆಗ್ರಹ
Team Udayavani, Nov 5, 2024, 1:40 AM IST
ವಿಜಯಪುರ: ವಕ್ಫ್ ಅವಾಂತರದ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ವಿಜಯಪುರದಲ್ಲಿ ಕಿಸಾನ್ ಸಂಘದ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಸುಮಾರು 35 ಸ್ವಾಮೀಜಿಗಳು ಸಾಥ್ ನೀಡಿದ್ದು ಪ್ರತಿಭಟನೆ ಮತ್ತಷ್ಟು ಕಾವೇರಿದೆ.
ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಪ್ರತಿಭಟನೆಯ ವೇದಿಕೆಯಲ್ಲಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಗುರು ಸಂಗನಬಸವ ಶಿವಾಚಾರ್ಯರು, ಬುರಾಣಪುರದ ಯೋಗೇಶ್ವರಿ ಮಾತಾಜಿ ಸೇರಿದಂತೆ ಹಲವು ಸ್ವಾಮೀಜಿಗಳು ಇದ್ದರು.
ವೇದಿಕೆ ಕೆಳಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ರಮೇಶ ಜಿಗಜಿಣಗಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಮುಖಂಡರು ಕುಳಿತಿದ್ದರು. ಕನೇರಿ ಶ್ರೀ, ಜಯಮೃತ್ಯುಂಜಯ ಶ್ರೀಗಳು ವಕ್ಫ್ ವಿರುದ್ಧ ಗುಡುಗಿ, ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ವಕ್ಫ್ ಕುರಿತ ಎಲ್ಲ ಗೆಜೆಟ್‌ಗಳನ್ನು ರದ್ದು ಮಾಡಬೇಕು. ಸಚಿವ ಜಮೀರ್ ಅಹ್ಮದ್ ರಾಜೀನಾಮೆ ಪಡೆಯಬೇಕು. ವಕ್ಫ್ ಕಾಯ್ದೆ ಸಂಪೂರ್ಣ ತೊಲಗಬೇಕು ಎಂದು ಆಗ್ರಹಿಸಿದರು. ಯತ್ನಾಳ ಅಹೋ ರಾತ್ರಿ ಧರಣಿ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.