Waqf Property: ಶಾಸಕ ಯತ್ನಾಳ್ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ
ವಿಜಯೇಂದ್ರ ಕಾರ್ಯಕ್ರಮವೇ ನಮ್ಮನ್ನು ತುಳಿಯುವುದು ಎಂದ ಶಾಸಕ ಬಸನಗೌಡ ಪಾಟೀಲ್
Team Udayavani, Oct 28, 2024, 9:32 PM IST
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯು ಆಸ್ತಿ ವಶಕ್ಕಾಗಿ ರೈತರಿಗೆ ನೋಟಿಸ್ ನೀಡಿರುವ ಸಂಬಂಧ ಅಲ್ಲಿಗೆ ಭೇಟಿ ನೀಡಿ ನೊಂದ ರೈತರ ಅಹವಾಲು ಆಲಿಸುವ ಬಿಜೆಪಿ ತಂಡದ ಬಗ್ಗೆ ಅದೇ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ ಬೆನ್ನಲ್ಲೇ, ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ರಚಿಸಿದ್ದ ತಂಡವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪುನಾರಚನೆ ಮಾಡಿದ್ದಾರೆ.
ಈಗಾಗಲೇ ಇರುವ ಸದಸ್ಯರ ಜೊತೆಗೆ ಸಂಸದ ರಮೇಶ್ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಜಿಲ್ಲೆಯ ಮಾಜಿ ಅಧ್ಯಕ್ಷ ಎಂ.ಬಿ. ಜಿರಲಿ ಅವರನ್ನು ಸೇರ್ಪಡೆ ಮಾಡಲಾಗಿದೆ. ಇದು ವಿಜಯೇಂದ್ರ ಟೀಂ. ನಾನು ಹಾಗೂ ಸಂಸದರು ಬಿಜೆಪಿ ತಂಡಕ್ಕೆ ಬಹಿಷ್ಕಾರ ಹಾಕಿದ್ದೇವೆ. ವಿಜಯೇಂದ್ರ ಕಾರ್ಯಕ್ರಮವೇ ನಮ್ಮನ್ನು ತುಳಿಯುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನವನ್ನು ಹೊರಹಾಕಿದ್ದರು. ಇದರ ಬೆನ್ನಲ್ಲೇ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ.
ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ಮೇಲ್ಮನೆ ಮಾಜಿ ಸದಸ್ಯ ಅರುಣ್ ಶಹಾಪುರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಅವರೂ ತಂಡದಲ್ಲಿದ್ದು, ಸಮಿತಿಯ ಎಲ್ಲ ಸದಸ್ಯರೂ ಮಂಗಳವಾರ (ಅ.29) ವಿಜಯಪುರಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಲಿದ್ದಾರೆ.
ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ಅನ್ಯಾಯ ಹಾಗೂ ವಕ್ಫ್ ಬೋರ್ಡ್ನಿಂದ ರೈತರು ಎದುರಿಸುತ್ತಿರುವ ಅಹವಾಲುಗಳನ್ನು ಸ್ವೀಕರಿಸಲು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ತಂಡ ರಚಿಸಿ, ಆದೇಶ ಹೊರಡಿಸಿದ್ದಾರೆ.
ಬಿಜೆಪಿ ನಿಯೋಗವು 29.10.2024 ರಂದು ವಿಜಯಪುರ ಜಿಲ್ಲೆಯಾದ್ಯಂತ ಭೇಟಿ ನೀಡಿ, ಭೂಮಿ… pic.twitter.com/dCAen4M8Qm
— BJP Karnataka (@BJP4Karnataka) October 28, 2024
ವಿಜಯಪುರ ಜಿಲ್ಲೆಗೆ ಇಂದು ಬಿಜೆಪಿ ತಂಡ
ವಕ್ಫ್ ಆಸ್ತಿ ವಿವಾದ ಕುರಿತು ರೈತರ ಅಹವಾಲು ಆಲಿಸಲು ನೇಮಕ ಮಾಡಿರುವ ಬಿಜೆಪಿ ತಂಡ ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದೆ. ಬೆಳಗ್ಗೆ 9 ಗಂಟೆಗೆ ಸಿಂದಗಿಯ ವಿರಕ್ತಮಠ, 9.40ಕ್ಕೆ ಪಡಗಾನೂರ, ಹಡಗಲಿ ಗ್ರಾಮಗಳಿಗೆ ಭೇಟಿ ನೀಡಲಿದೆ. ಬಳಿಕ ಅಥಣಿ ರಸ್ತೆಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಿ ರೈತರ ಅಹವಾಲು ಸ್ವೀಕರಿಸಲಿದೆ.
ಅಲ್ಲಿಂದ 3.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ನಿಯೋಗದೊಂದಿಗೆ ತೆರಳಿ ಜಿಲ್ಲಾಧಿಕಾರಿ ಭೇಟಿಯಾಗಲಿದೆ. ಜಿಲ್ಲಾಧಿಕಾರಿ, ಕಂದಾಯ, ಭೂಮಿ ಕೇಂದ್ರ, ವಕ್ಫ್ ಹಾಗೂ ವಿವಿಧ ರೈತ ಪ್ರತಿನಿಧಿಗಳೊಂದಿಗೆ ಜಂಟಿ ಸಭೆ ನಡೆಸುವ ನಿಟ್ಟಿನಲ್ಲಿ ಸಮಾಲೋಚನಾ ಸಭೆ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.