Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿಸಿದರೆ, ಸಚಿವ ಜಮೀರ್‌ರಿಂದ ಬೆಂಕಿ ಹಚ್ಚುವ ಕೆಲಸ : ಬಿಜೆಪಿ ರಾಜ್ಯಾಧ್ಯಕ್ಷ
Team Udayavani, Nov 4, 2024, 6:30 AM IST
ಚಿತ್ರದುರ್ಗ: ಶಾಂತಿಯುತವಾಗಿರುವ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವ ಸಚಿವ ಜಮೀರ್ ಅಹ್ಮದ್ ಅವರನ್ನು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನವರು ಜಮೀರ್ ಮಾಡುತ್ತಿರುವ ಕೆಲಸ ನೋಡುತ್ತಿಲ್ಲವೇ? ರಾಜ್ಯಾದ್ಯಂತ ಸಂಚರಿಸಿ ಅ ಧಿಕಾರಿಗಳ ಮೇಲೆ ದಬ್ಟಾಳಿಕೆ, ಗೂಂಡಾಗಿರಿ ಮಾಡುತ್ತಿದ್ದಾರೆ. ಮಠ-ಮಾನ್ಯಗಳು, ರೈತರ ಜಮೀನನ್ನು ವಕ್ಫ್ ಬೋರ್ಡ್ ಮೂಲಕ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಗೊಂದಲ ಸೃಷ್ಟಿ ಮಾಡಿದರೆ, ಸಚಿವ ಜಮೀರ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಹಿಂದೂಗಳ, ರೈತರ, ದೇವಸ್ಥಾನ, ಮಠ-ಮಾನ್ಯಗಳ ಜಮೀನನ್ನು ಕಸಿದುಕೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದರು. ಮುಖ್ಯಮಂತ್ರಿಗಳು ನೋಟಿಸ್ ಹಿಂಪಡೆಯುತ್ತೇವೆ ಎಂದು ಹೇಳುವ ಮೂಲಕ ಮೊಸಳೆ ಕಣ್ಣಿರು ಹಾಕುತ್ತಿದ್ದಾರೆ. ಇವರಿಗೆ ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಶನ್ ಹಿಂಪಡೆದು ರದ್ದು ಮಾಡಲಿ. ಈಗ ನೋಟಿಸ್ ಹಿಂಪಡೆದು ಉಪಚುನಾವಣೆ ಅನಂತರ ಮತ್ತೆ ಅನ್ಯಾಯ ಮಾಡಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ ಎಂದರು.
2 ವರ್ಷದಿಂದ ಅನುದಾನವಿಲ್ಲ
ರಾಜ್ಯದಲ್ಲಿ ದಿನೇದಿನೆ ಉಪಚುನಾವಣೆ ಕಾವು ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಅನಂತರ ಅಹಿಂದ ಎಂದು ಹೇಳಿಕೊಳ್ಳುತ್ತಲೇ ಹಿಂದ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಬಹುತೇಕ ನಿಂತು ಹೋಗಿವೆ. ಆಡಳಿತ ಪಕ್ಷದ ಶಾಸಕರೇ ಛೀಮಾರಿ ಹಾಕುತ್ತಿದ್ದಾರೆ. ಕಳೆದ 2 ವರ್ಷದಲ್ಲಿ ಮುಖ್ಯಮಂತ್ರಿಗಳು ಯಾವುದೇ ಕ್ಷೇತ್ರಕ್ಕೂ ಅನುದಾನ ನೀಡಿಲ್ಲ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಚಾಕು ಇರಿದು ಯುವಕನ ಕೊಲೆ ಪ್ರಕರಣ… ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು
IT Raid: ಬೆಳಗಾವಿಯ ಉದ್ಯಮಿ ದೊಡ್ಡಣ್ಣವರ ಸೇರಿ ನಾಲ್ವರು ಉದ್ಯಮಿಗಳಿಗೆ ಐಟಿ ಶಾಕ್
BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು
BJP; ಭಿನ್ನರಿಗೆ ವರಿಷ್ಠರ ಬುಲಾವ್: ರೆಡ್ಡಿ,ರಾಮುಲುಗೂ ಆಹ್ವಾನ
ಶ್ರದ್ಧೆ ಇದ್ದವರಿಗೆ ಮಾತ್ರ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಅವಕಾಶ: ಸಚಿವರಿಗೆ ಮನವಿ
MUST WATCH
ಹೊಸ ಸೇರ್ಪಡೆ
Hubballi: ಚಾಕು ಇರಿದು ಯುವಕನ ಕೊಲೆ ಪ್ರಕರಣ… ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು
IT Raid: ಬೆಳಗಾವಿಯ ಉದ್ಯಮಿ ದೊಡ್ಡಣ್ಣವರ ಸೇರಿ ನಾಲ್ವರು ಉದ್ಯಮಿಗಳಿಗೆ ಐಟಿ ಶಾಕ್
Arrested: 1 ಕೋಟಿಗೆ 5 ಕೋಟಿ ರೂ. ಕೊಡುವುದಾಗಿ 5.75 ಕೋಟಿ ರೂ. ವಂಚನೆ; ಮೂವರ ಸೆರೆ
BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು
Kotekar Robbery Case: ದರೋಡೆ ಯೋಜನೆಯ ಹಿಂದೆ ಒಬ್ಬನಲ್ಲ; ಇಬ್ಬರು ಸೂತ್ರಧಾರರು?