Waqf Property: ಮಾಜಿ ಸಿಎಂಗಳ ದಾಖಲೆ ಶೀಘ್ರ ಬಿಡುಗಡೆ: ಸಿಎಂ ಸಿದ್ದರಾಮಯ್ಯ
ಬಿ.ಎಸ್.ಯಡಿಯೂರಪ್ಪ, ಸದಾನಂದ ಗೌಡ, ಶೆಟ್ಟರ್, ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರ ಆಸ್ತಿ ವಕ್ಫ್ ಮಂಡಳಿಗೆ ಖಾತೆ ಬದಲಾವಣೆ
Team Udayavani, Nov 4, 2024, 7:10 AM IST
ಬೆಂಗಳೂರು: ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್ ಹಾಗೂ ಇವರ ಈಗಿನ ಮಿತ್ರ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು. ಅದಕ್ಕೆ ಸಿದ್ಧರಾಗಿರಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಟಿ ಸವಾಲು ಹಾಕಿದ್ದಾರೆ.
ಬಿ.ವೈ. ವಿಜಯೇಂದ್ರ “ಎಕ್ಸ್’ ಮೂಲಕ ಪೋಸ್ಟ್ ಮಾಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ಅವರ ಜತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ. ನಿಮ್ಮ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ. ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜತೆ ಚರ್ಚಿಸಿ ನಂತರ ಬನ್ನಿ’ ಎಂದು ಲೇವಡಿ ಮಾಡಿದ್ದಾರೆ.
ದುರ್ಯೋಧನ-ದುಶ್ಯಾಸನರ ಇತಿಹಾಸ ಕೆದಕಬೇಕಾ?
ನಮ್ಮ ಸರಕಾರದ ಅವಧಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿವೆ ಎಂದು ಆರೋಪಿಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ? ನಿಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನಿಮ್ಮದೇ ಶಾಸಕರು ಹೇಗೆ ದುರ್ಯೋಧನ – ದುಶ್ಯಾಸನರ ರೀತಿಯಲ್ಲಿ ನಡೆದುಕೊಂಡಿದ್ದರು ಎನ್ನುವ ಇತಿಹಾಸವನ್ನು ನಾನು ಕೆದಕಲು ಹೋಗುವುದಿಲ್ಲ. ಆದರೆ, ಪೋಕ್ಸೋ ಕಾಯ್ದೆಯಡಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರನ್ನು ಮನೆಯಲ್ಲಿಟ್ಟುಕೊಂಡು ನಮಗೆ ಹೆಣ್ಣುಮಕ್ಕಳ ರಕ್ಷಣೆಯ ಪಾಠ ಮಾಡಲು ಕನಿಷ್ಠ ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಟೀಕಿಸಿದ್ದಾರೆ.
ಬೇಟಿ ಬಚಾವೋ ಬೇಟಿ ಪಡಾವೋ ಎಂದು ಆಗಾಗ ಘೋಷಣೆ ಕೂಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಘೋಷಣೆಗೆ ಬದ್ಧರಾಗಿದ್ದರೆ, ಪೋಕೊÕ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ ಸ್ಥಾನದಿಂದ ಮತ್ತು ಅವರನ್ನು ರಕ್ಷಿಸುತ್ತಿರುವ ನಿಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಲಿ ಎಂದು ಸವಾಲು ಹಾಕಿದರು.
ದುಸ್ಸಾಹಸ ಮಾಡಬೇಡಿ
ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೇ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಫಿಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್‌ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.