Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ರೆಬೆಲ್ಸ್ ಟೀಂ ಭೇಟಿಗೆ ಶೀಘ್ರ ಅಮಿತ್ ಶಾ ಅವಕಾಶ?
Team Udayavani, Jan 8, 2025, 1:05 AM IST
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರೋಧದ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ರೆಬೆಲ್ಸ್ ಟೀಂ ನಡೆಸಿದ ವಕ್ಫ್ ಹೋರಾಟದ ವರದಿ ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತಲುಪಿದೆ.
ಕೇಂದ್ರ ಅಲ್ಪಸಂಖ್ಯಾಕ ಖಾತೆ ಸಚಿವ ಕಿರಣ್ ರಿಜಿಜು ಅವರನ್ನು ಸೋಮವಾರ ಭೇಟಿ ಮಾಡಿದ್ದ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ರಮೇಶ್ ಜಾರಕಿಹೊಳಿ ನೇತೃತ್ವದ ತಂಡವು ರಾಜ್ಯದಲ್ಲಿ ನಡೆದ ವಕ್ಫ್ ಹಗರಣದ ಬಗೆಗಿನ ಸಂಕ್ಷಿಪ್ತ ವರದಿ ಹಾಗೂ ಅರ್ಧ ಗಂಟೆಯ ಡಾಂಕ್ಯುಮೆಂಟರಿಯನ್ನು ಸಲ್ಲಿಕೆ ಮಾಡಿತ್ತು.
ಆ ಬಳಿಕ ಈ ವರದಿ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಿಜಿಜು ವಿವರಣೆ ನೀಡಿದ್ದರು ಎನ್ನಲಾಗಿದೆ. ಕರ್ನಾಟಕದಲ್ಲಿ ನಡೆದ ವಕ್ಫ್ ಹಗರಣದ ಬಗ್ಗೆ ಒಂದು ಚಿತ್ರಣ ನೀಡುವುದಕ್ಕೆ ಕನಿಷ್ಠ 4 ಗಂಟೆಗಳ ಕಾಲ ಚರ್ಚೆ ನಡೆಸಬೇಕಾಗುತ್ತದೆ ಎಂದು ಹೇಳಿದಾಗ, ರೆಬೆಲ್ಸ್ ಟೀಂ ಭೇಟಿಗೆ ಸದ್ಯದಲ್ಲೇ ಅವಕಾಶ ಕಲ್ಪಿಸುವುದಾಗಿ ಶಾ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.