Water Canal: ನಾಲೆ ನೀರು ಕದ್ದರೆ 2 ವರ್ಷ ಜೈಲು, 2 ಲಕ್ಷ ರೂ. ದಂಡ!
Team Udayavani, Jul 23, 2024, 6:20 AM IST
ಬೆಂಗಳೂರು: ಯಾವುದೇ ನಾಲೆಯಿಂದ ಅನಧಿಕೃತವಾಗಿ ನೀರೆತ್ತುವವರ ವಿರುದ್ಧ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ಹಲವು ಪಟ್ಟು ಹೆಚ್ಚಿಸು ವುದರ ಜತೆಗೆ ನಾಲೆಯ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಕೊಳವೆಬಾವಿ ಮತ್ತಿತರ ಎಲ್ಲ ಪ್ರಕಾರದ ಅಂತರ್ಜಲ ಮೂಲಗಳನ್ನು ನಿಗದಿತ ಅವಧಿಯಲ್ಲಿ ನೋಂದಣಿ ಕಡ್ಡಾಯಗೊಳಿಸಲು ಸರಕಾರ ನಿರ್ಧರಿಸಿದೆ.
“ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ-2024’ನ್ನು ಸೋಮವಾರ ಕೆಳಮನೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಂಡಿಸಿದರು. ನಾಲೆ/ ಕೊಳವೆಯನ್ನು ಚುಚ್ಚುವುದು ಅಥವಾ ಕತ್ತರಿಸುವುದು ಅಥವಾ ಇಳಿ ಗೊಳವೆಯನ್ನು ಸೇರಿಸುವಂತಹ ಕೃತ್ಯಗಳಿಗೆ ಪ್ರಸ್ತುತ 1 ವರ್ಷದ ಕಾರಾಗೃಹ ಶಿಕ್ಷೆ ಅಥವಾ 1,000 ರೂ. ಜುಲ್ಮಾನೆ ಇದೆ. ಇದಕ್ಕೆ ಸಂಬಂಧಿಸಿದ ಇತರ ಉಲ್ಲಂಘನೆಗಳಿಗೆ ಮತ್ತೆ 2 ತಿಂಗಳು ಸೆರೆವಾಸ ವಿಸ್ತರಣೆ ಅಥವಾ 500 ರೂ. ದಂಡ ಇತ್ತು. ಮಸೂದೆ ಅಂಗೀಕಾರಗೊಂಡ ಅನಂತರ 2 ವರ್ಷ ಜೈಲು ಅಥವಾ 2 ಲಕ್ಷ ರೂ. ದಂಡ ವಿಧಿಸಲಾಗು ತ್ತದೆ. ಇತರ ಉಲ್ಲಂಘನೆಗಳಿದ್ದರೆ 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ಯಾ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ
ಶ್ರೀರಂಗಪಟ್ಟಣ: ರೈತರ ಜೀವನಾಡಿಯಾಗಿರುವ ಕಾವೇರಿ ತಾಯಿಗೆ ಪುಣ್ಯ ಕ್ಷೇತ್ರ ಕಾಶಿಯಲ್ಲಿ ಮಾಡುವ ಗಂಗಾರತಿ ಮಾದರಿಯಲ್ಲಿ “ಕಾವೇರಿ ಆರತಿ’ ಮಾಡಲು ಚಿಂತಿಸಲಾಗುತ್ತಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಬಗ್ಗೆ ಮಂಡ್ಯ ಹಾಗೂ ಕೊಡಗು ಜಿಲ್ಲೆಯ ಶಾಸಕರು, ಧಾರ್ಮಿಕ ದತ್ತಿ ಇಲಾಖೆ ಅ ಧಿಕಾರಿಗಳ ತಂಡ ರಚಿಸಿ ಕಾವೇರಿ ಆರತಿ ಪ್ರಾರಂಭಿಸಲು ಒಂದು ತಿಂಗಳೊಳಗೆ ವರದಿ ನೀಡಲು ತಿಳಿಸಲಾಗುವುದು. ಬಳಿಕ ಮುಖ್ಯಮಂತ್ರಿ ಜತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.