ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅವೈಜ್ಞಾನಿಕವೆ?

Team Udayavani, Sep 4, 2021, 7:35 AM IST

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅವೈಜ್ಞಾನಿಕವೆ?

ಉಡುಪಿ: ರಾಜ್ಯ ಸರಕಾರ ಹಾಸನ, ಕೊಡಗು, ದ.ಕ. ಜಿಲ್ಲೆಗಳೊಂದಿಗೆ ಉಡುಪಿ ಜಿಲ್ಲೆಗೂ ವಾರಾಂತ್ಯ ಕರ್ಫ್ಯೂ ವಿಧಿಸಿರುವುದು ಅವೈಜ್ಞಾನಿಕವೆ? ಇಂತಹ ಚರ್ಚೆಗಳು ಎರಡು ದಿನಗಳಿಂದ ನಡೆಯುತ್ತಿವೆ. ಇತ್ತೀಚೆಗಷ್ಟೇ ಲಾಕ್‌ಡೌನ್‌ನಿಂದ ವಿನಾಯಿತಿ ಪಡೆದು ನಿಧಾನಗತಿಯಲ್ಲಿ ಚಿಗುರುತ್ತಿದ್ದ ಆರ್ಥಿಕ ಚಟುವಟಿಕೆಗಳು ವಾರಾಂತ್ಯ ಕರ್ಫ್ಯೂ ಆದೇಶದಿಂದ ಮತ್ತೆ ಕಮರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 2ಕ್ಕಿಂತ ಹೆಚ್ಚಿಗೆ ಇರುವಾಗ ಶಾಲಾ ಕಾಲೇಜುಗಳನ್ನು ಆರಂಭಿಸಲು ಅವಕಾಶ ನೀಡಿರಲಿಲ್ಲ. ಶೇ. 2ಕ್ಕಿಂತ ಕಡಿಮೆ ಯಾಗುತ್ತಿದ್ದಂತೆ ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಲಾಯಿತು. ಈಗಿನ ಪಾಸಿಟಿವಿಟಿ ಪ್ರಮಾಣ 14 ದಿನಗಳಲ್ಲಿ ಶೇ. 1.54 ಮತ್ತು ಏಳು ದಿನಗಳಲ್ಲಿ ಶೇ. 1.27ಕ್ಕೆ ಇಳಿದಿದೆ. ಹೀಗಿರುವಾಗಲೂ ವಾರಾಂತ್ಯ ಕರ್ಫ್ಯೂ ಅಗತ್ಯವೇನು ಎಂಬ ಪ್ರಶ್ನೆ ಕೇಳಿಬರುತ್ತಿದೆ.

ರಾಜ್ಯದ ಸರಾಸರಿಗಿಂತ ಉಡುಪಿ ಜಿಲ್ಲೆಯ ಸರಾಸರಿ ಪಾಸಿಟಿವಿಟಿ ಪ್ರಮಾಣ ಹೆಚ್ಚಿಗೆ ಇರುವುದರಿಂದ ಕೊರೊನಾ ಸೋಂಕು ಪ್ರಸರಣ ತಡೆಯಲು ಸರಕಾರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಅಭಿಪ್ರಾಯಪಟ್ಟರೆ, ಶಾಸಕ ಕೆ. ರಘುಪತಿ ಭಟ್‌ ವಾರಾಂತ್ಯ ಕರ್ಫ್ಯೂ ಸೂಕ್ತವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯ ಪರೀಕ್ಷಾ ದರ, ವ್ಯಾಕ್ಸಿನೇಶನ್‌ ಪ್ರಮಾಣ ಉತ್ತಮವಿದೆ. ಪಾಸಿಟಿವಿಟಿ ದರವೂ ಕಡಿಮೆಯಾಗಿದೆ. ಉಡುಪಿ ಜಿಲ್ಲೆ ಗಡಿ ಜಿಲ್ಲೆಯಲ್ಲ. ಹೀಗಾಗಿ ವಾರಾಂತ್ಯ ಕರ್ಫ್ಯೂ ಸಮಂಜಸವಲ್ಲ. ಸಚಿವ ಸುನಿಲ್‌ ಅವರಲ್ಲಿ ಮಾತನಾಡಿದ್ದು ಅವರೂ ನನ್ನ ಅಭಿಪ್ರಾಯವನ್ನು ಸಮ್ಮತಿಸಿದ್ದಾರೆ; ಬೆಂಗಳೂರಿನಲ್ಲಿ ರವಿವಾರ ಮತ್ತೆ ಸಭೆ ನಡೆಯಲಿದ್ದು, ಮುಂದಿನ ವಾರದಿಂದ ರಿಯಾಯಿತಿ ಲಭಿಸಬಹುದು ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಮಾಲ್‌, ದಿನಸಿ ಅಂಗಡಿಗಳು ಮಧ್ಯಾಹ್ನದವರೆಗೆ ತೆರೆದಿರಬಹುದು. ಫ್ಯಾನ್ಸಿ ಅಂಗಡಿ, ಚಪ್ಪಲಿ ಅಂಗಡಿ ಮುಂತಾದುವು ಏನು ಮಾಡಿವೆ ಎಂಬ ಪ್ರಶ್ನೆ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಅವರದು.

ಟಾಪ್ ನ್ಯೂಸ್

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.