West Indies vs Bangladesh: 15 ವರ್ಷ ಬಳಿಕ ವಿಂಡೀಸ್ ವಿರುದ್ಧ ಟೆಸ್ಟ್ ಗೆದ್ದ ಬಾಂಗ್ಲಾ
Team Udayavani, Dec 5, 2024, 2:14 AM IST
ಕಿಂಗ್‌ಸ್ಟನ್ (ಜಮೈಕಾ): ವೆಸ್ಟ್ ಇಂಡೀಸ್ ಎದುರಿನ ಕಿಂಗ್‌ಸ್ಟನ್ ಟೆಸ್ಟ್ ಪಂದ್ಯವನ್ನು 101 ರನ್ನುಗಳಿಂದ ಗೆದ್ದ ಬಾಂಗ್ಲಾದೇಶ, ಸರಣಿಯನ್ನು 1-1 ಸಮಬಲದಲ್ಲಿ ಮುಗಿಸುವಲ್ಲಿ ಯಶಸ್ವಿಯಾಗಿದೆ.
ಇದು 15 ವರ್ಷಗಳ ಬಳಿಕ ಕೆರಿಬಿಯನ್ ನೆಲದಲ್ಲಿ ಬಾಂಗ್ಲಾದೇಶಕ್ಕೆ ಒಲಿದ ಮೊದಲ ಟೆಸ್ಟ್ ಗೆಲುವು ಕೂಡ ಆಗಿದೆ. 2009ರ ಪ್ರವಾಸದ ವೇಳೆ ಬಾಂಗ್ಲಾ 2-0 ಜಯ ಸಾಧಿಸಿತ್ತು. ಅನಂತರದ ಅವಧಿಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ಆಡಿದ ಏಳೂ ಟೆಸ್ಟ್‌ಗಳನ್ನು ಸೋತಿತ್ತು. ಇದರಲ್ಲಿ ಪ್ರಸಕ್ತ ಸರಣಿಯ ಮೊದಲ ಟೆಸ್ಟ್ ಕೂಡ ಸೇರಿದೆ.
“ಸಬೀನಾ ಪಾರ್ಕ್’ನ ಬೌಲಿಂಗ್ ಟ್ರ್ಯಾಕ್‌ನಲ್ಲಿ ಗೆಲುವಿಗೆ 287 ರನ್ನುಗಳ ಗುರಿ ಪಡೆದ ವೆಸ್ಟ್ ಇಂಡೀಸ್, ಪಂದ್ಯದ 4ನೇ ದಿನವೇ 185ಕ್ಕೆ ಆಲೌಟ್ ಆಯಿತು.
ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಮ್ 5 ವಿಕೆಟ್ ಉರುಳಿಸಿ ವಿಂಡೀಸಿಗೆ ಘಾತಕವಾಗಿ ಪರಿಣಮಿಸಿದರು. ಚೇಸಿಂಗ್ ವೇಳೆ ಕವೆಮ್ ಹಾಜ್ ಸರ್ವಾಧಿಕ 55, ನಾಯಕ ಕ್ರೆಗ್ ಬ್ರಾತ್‌ವೇಟ್ 43 ರನ್ ಮಾಡಿದರು.
ಸಂಕ್ಷಿಪ್ತ ಸ್ಕೋರ್:
ಬಾಂಗ್ಲಾದೇಶ-164 ಮತ್ತು 268, ವೆಸ್ಟ್ ಇಂಡೀಸ್-146 ಮತ್ತು 185.
ಪಂದ್ಯಶ್ರೇಷ್ಠ: ತೈಜುಲ್ ಇಸ್ಲಾಮ್
ಸರಣಿಶ್ರೇಷ್ಠ: ತಸ್ಕಿನ್ ಅಹ್ಮದ್, ಜೇಡನ್ ಸೀಲ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.