ಬಿಜೆಪಿ ಶಾಸಕರಿಗೆ ವಿಪ್ ಜಾರಿ ! ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗೆಲ್ಲಿಸಲು ಪಣ
Team Udayavani, Feb 17, 2020, 7:05 AM IST
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ ಮತದಾನ ಮಾಡಿ, ಬಳಿಕ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸೂಚನೆ ನೀಡಲಾಗಿದೆ.
ನಗರದ ಖಾಸಗಿ ಹೊಟೇಲ್‌ನಲ್ಲಿ ರವಿವಾರ ರಾತ್ರಿ ನಡೆದ ಸಭೆಯಲ್ಲಿ ಸಿಎಂ ಬಿಎಸ್‌ವೈ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಶಾಸಕರಿಗೆ ನಿರ್ದಿಷ್ಟ ಸೂಚನೆ ನೀಡಿದರು. ಮುಖ್ಯವಾಗಿ, ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿ ರುವ ಡಿಸಿಎಂ ಲಕ್ಷ್ಮಣ ಸವದಿಯವರನ್ನು ಗೆಲ್ಲಿಸಬೇಕಿದ್ದು, ಎಲ್ಲರೂ ಬೆಳಗ್ಗೆಯೇ ಮತದಾನ ಮಾಡಿ ಬಳಿಕ ಅಧಿವೇಶನಕ್ಕೆ ಹಾಜರಾಗಬೇಕು ಎಂದಿದ್ದಾರೆ.
ಸದಸ್ಯರೆಲ್ಲ ಚರ್ಚೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು. ನೂತನ ಸಚಿವರು ತಮ್ಮ ಇಲಾಖೆಗೆ ಸಂಬಂಧಪಟ್ಟ ಅಂಕಿ ಸಂಖ್ಯೆಗಳೊಂದಿಗೆ ಸಜ್ಜಾಗಿ ಬರಬೇಕು. ವಿಪಕ್ಷ ಆರೋಪಗಳಿಗೆ ತಕ್ಕ ಪ್ರತ್ಯುತ್ತರ ನೀಡಬೇಕು. ಶಾಸಕರು ದನಿಗೂಡಿಸಬೇಕು. ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಲು, ಪ್ರತಿರೋಧ ತೋರಲು ವಿಪಕ್ಷಗಳು ಮುಂದಾದರೆ ತಿರುಗೇಟು ನೀಡಬೇಕು ಎಂದು ಹಿರಿಯ ನಾಯಕರು ಸೂಚಿಸಿದ್ದಾರೆ. ಶಾಸಕಾಂಗ ಸಭೆಯಲ್ಲಿ ನೂತನ ಸಚಿವರ ಸಹಿತ 98 ಶಾಸಕರು ಪಾಲ್ಗೊಂಡಿದ್ದರು. ಕೆಲವರು ಪೂರ್ವಾನುಮತಿ ಪಡೆದು ಗೈರಾಗಿದ್ದರು ಎನ್ನಲಾಗಿದೆ.
ಮತ ಹಾಕಿ ಅಧಿವೇಶನಕ್ಕೆ ಬನ್ನಿ
ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಬೆಳಗ್ಗೆಯೇ ಮತದಾನ ಮಾಡಿ ಬಳಿಕ ಸದನಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ವಿಧಾನ ಸಭೆ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ತಿಳಿಸಿದರು.
“ಬಜೆಟ್‌ಗೆ ಸಲಹೆ ಕೊಡಿ’
ಮಾ. 5ರಂದು ಬಜೆಟ್ ಮಂಡನೆಯಾಗಲಿದ್ದು, ಈ ಜನಪರ ಬಜೆಟ್‌ಗೆ ಸೂಕ್ತ ಸಲಹೆ ನೀಡುವಂತೆ ಶಾಸಕರಿಗೆ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.