ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದವರು ಯಾರು? ದೇವೇಗೌಡರಿಗೆ ಸಿದ್ದರಾಮಯ್ಯ ಪ್ರಶ್ನೆ
Team Udayavani, Dec 27, 2020, 5:50 PM IST
ಮೈಸೂರು: ಬೇರೊಬ್ಬರ ಮೇಲೆ ಆರೋಪ ಮಾಡುವ ಬದಲು ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು ಯಾರು ಎಂಬುದನ್ನು ದೇವೇಗೌಡರೇ ಬಹಿರಂಗಪಡಿಸಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಸಿಎಂ ಸ್ಥಾನಕ್ಕೆ ಖರ್ಗೆ ಹೆಸರು ತಿರಸ್ಕರಿಸಿದ್ದು ನಾನಂತೂ ಅಲ್ಲ. ಯಾರು ಖರ್ಗೆ ಹೆಸರು ತಿರಸ್ಕಾರ ಮಾಡಿದವರು ಎಂಬ ಹೆಸರು ಹೇಳಲಿ. ಯಾರು ಮಾಡಿದರು ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಅವರಿಗೆ ಗೊತ್ತಿದ್ದರೆ ಹೆಸರು ಹೇಳಲಿ ಎಂದು ಮಾಧ್ಯಮಗಳೊಂದಿಗೆ ಮಾರ್ಮಿಕವಾಗಿ ನುಡಿದರು.
ದೇವೇಗೌಡರ ಬಗ್ಗೆ ನಾನು ಪ್ರತಿಕ್ರಿಯೆ ನೀಡಬಾರದು ಎಂದುಕೊಂಡಿದ್ದೇನೆ. 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು? 6 ವರ್ಷಗಳ ಕಾಲ ಜೆಡಿಎಸ್ ಅಧ್ಯಕ್ಷನಾಗಿದ್ದು ನಾನು? ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ? ಎಂದು ಪ್ರಶ್ನಿಸಿದರು.
ಇಬ್ಬಾಗ ಮಾಡುವ ಹುನ್ನಾರ :
ಡಿ.29ಕ್ಕೆ ಮೈಸೂರಿನಲ್ಲಿ ಕುರುಬರ ಎಸ್‌ಟಿ ಮೀಸಲಾತಿ ಹೋರಾಟ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕುರುಬ ಸಮುದಾಯ ಎಸ್‌ಟಿಗೆ ಸೇರಿಸಲು ಹೋರಾಟದ ಅಗತ್ಯವೇ ಇಲ್ಲ. ಇದು ಕುರುಬರನ್ನು ಇಬ್ಬಾಗ ಮಾಡುವ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಸಿಎಂ ಆಗಿದ್ದಾಗಲೇ ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸ್ಸು ಮಾಡಿದ್ದೆ. ಈಶ್ವರಪ್ಪ, ವಿಶ್ವನಾಥ್ ಇಬ್ಬರೂ ಬಿಜೆಪಿ ಸರ್ಕಾರದಲ್ಲಿದ್ದಾರೆ. ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸಲಿ ಎಂದರು.
ಸಿದ್ದರಾಮಯ್ಯ ನನ್ನ ಫ್ರೆಂಡು:
ಸಿದ್ದರಾಮಯನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರವರನ್ನ ಭೇಟಿಯಾಗಲು ಲಕ್ಷ್ಮಮ್ಮ ಎಂಬ ವೃದ್ದೆ ಊರುಗೋಲು ಹಿಡಿದುಕೊಂಡು ಕಾದು ಕುಳಿತಿದ್ದಲ್ಲದೆ, ಸಿದ್ದರಾಮಯ್ಯ ನನ್ನ ಫ್ರೆಂಡ್. ಅದಕ್ಕೋಸ್ಕರ ಅವರನ್ನು ಭೇಟಿ ಮಾಡಲು ಬಂದಿದ್ದೀನಿ ಎಂದು ಲಕ್ಷ್ಮಮ್ಮ ಎಂಬ ವೃದ್ದೆ ಎಲ್ಲರನ್ನೂ ಆಕರ್ಷಿಸಿದ ಘಟನೆ ನಡೆಯಿತು.
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಸ್ವಗ್ರಾಮ ಸಿದ್ದರಾಮಯನಹುಂಡಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಲಕ್ಷ್ಮಮ್ಮ ಮತಗಟ್ಟೆ ಬಳಿಗೆ ಆಗಮಿಸಿದ್ದರು. ಮಾತ್ರವಲ್ಲದೆ ನಾನು ಸಿದ್ದರಾಮಯ್ಯನನ್ನು ನೋಡಲೇಬೇಕೆಂದು ಮತಗಟ್ಟೆ ಹೊರಗೆ ಕಾದುಕುಳಿತಿದ್ದ ಲಕ್ಷ್ಮಮ್ಮ, ಸಿದ್ದರಾಮಯ್ಯ ಮತಹಾಕಿ ಹೊರಬಂದ ಕೂಡಲೇ ಕಾರಿನ ಬಳಿ ನಿಂತು ಲಕ್ಷ್ಮಮ್ಮ ಮಾತನಾಡಿಸಿದರು.
ನನಗೂ ಸಿದ್ದರಾಮಯ್ಯರವರಿಗೂ ಆಸುಪಾಸು ಒಂದೇ ವಯಸ್ಸು. ಸಿದ್ದರಾಮಯ್ಯ ನನ್ನ ಫ್ರೆಂಡ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.