ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
ನಕ್ಸಲರ ಶರಣಾಗತಿ ಕುರಿತು ಪ್ರಶ್ನಿಸಿದ್ದ ಬಿಜೆಪಿಗರಿಗೆ ಪ್ರತ್ಯುತ್ತರ
Team Udayavani, Jan 9, 2025, 4:49 AM IST
ಬೆಂಗಳೂರು: ರಾಜ್ಯದಲ್ಲಿ 6 ಮಂದಿ ನಕ್ಸಲರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಕಳೆದ ತಿಂಗಳು ಛತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಭಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಕ್ಸಲರ ಶರಣಾಗತಿ ಕುರಿತು ಪ್ರಶ್ನಿಸಿದ್ದ ಬಿಜೆಪಿಗರಿಗೆ ಪತ್ರಿಕಾ ಹೇಳಿಕೆ ಮೂಲಕ ಪ್ರತ್ಯುತ್ತರ ಕೊಟ್ಟಿರುವ ಸಿಎಂ, ಅಮಿತ್ ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಪ್ರಶ್ನಿಸಿದ್ದಾರೆ. ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರಕಾರದ ಉಪಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ 41 ಲಕ್ಷ ರೂ.ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್‌ಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿದರು.
ಶರಣಾಗಿರುವ ಈ ನಕ್ಸಲಿಯರು ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ, ಇವರಲ್ಲಿ ಯಾರೊಬ್ಬರೂ ಜನರ ತೆರಿಗೆ ಹಣ ನುಂಗಿದ ಭ್ರಷ್ಟರೂ ಅಲ್ಲ. ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ಹೇಳಿದ್ದಾರೆ.
ಒಟ್ಟು 18 ನಕ್ಸಲರ ಶರಣಾಗತಿ
ಅನ್ಯಾಯ-ಶೋಷಣೆ ವಿರುದ್ಧ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರ ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವ ಧಿಯಲ್ಲೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಳೆದ ಅವಧಿಯಲ್ಲಿ ಹನ್ನೆರೆಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಶರಣಾಗಿರುವ ಆರು ಮಂದಿ ನಕ್ಸಲರು ಮುಂದಿನ ದಿನಗಳಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲಿಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
MUST WATCH
ಹೊಸ ಸೇರ್ಪಡೆ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.