Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್
ಜನರ ಗಮನ ಬೇರೆಡೆ ಸೆಳೆಯಲು ಆಪರೇಷನ್ ಕಮಲದ ಪ್ರಸ್ತಾಪವಷ್ಟೇ ಎಂದ ಮಾಜಿ ಸಚಿವ
Team Udayavani, Sep 1, 2024, 8:29 PM IST
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 14 ತಿಂಗಳ ನಂತರ ಈಗ ಕೋವಿಡ್ ಸಂದರ್ಭದಲ್ಲಿ ಹಗರಣ ನಡೆದಿದೆ ತನಿಖೆ ಮಾಡುತ್ತೇವೆ ಎಂದರೆ ಏನರ್ಥ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೊನಾ ಸಂದರ್ಭದಲ್ಲಿ ಹಗರಣ ನಡೆದಿದೆ ಎಂದು ಈಗ ಹೇಳುತ್ತಿರುವಂತಹವರೇ ವಿರೋಧ ಪಕ್ಷದಲ್ಲಿದ್ದಾಗ ಪ್ರಶ್ನಿಸಲಿಲ್ಲವೇಕೆ? ಅವರಿಗೇನಾದರೂ ಪಾಲು ಇತ್ತಾ. ಯಾವ ಕಾರಣಕ್ಕೆ ಇಷ್ಟು ದಿನ ಸುಮ್ಮನಿದ್ದರು. ಬಿಚ್ಚುಡುತ್ತೇನೆ ಎಂದು ಹೇಳುತ್ತಿರುವವರು ಅದೇನು ಬಿಚ್ಚಿಡುತ್ತಾರೋ ನೋಡೋಣ ಎಂದು ಸವಾಲು ಹಾಕಿದರು.
ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರದ ವಿರುದ್ಧ ಪ್ರಬಲ ಹೋರಾಟ ನಡೆಸಲಾಗುತ್ತಿದೆ. ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಾರೆ ಎಂದು ಆರೋಪಿಸುವ ಕಾಂಗ್ರೆಸ್‌ನವರು 136 ಶಾಸಕರಿದ್ದಾರೆ. ಆಪರೇಷನ್ ಕಮಲ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.
90 ಶಾಸಕರಿಗೆ 100 ಕೋಟಿ ರೂ. ಸಾಧ್ಯವೇ:
100 ಕೋಟಿಗೆ ಖರೀದಿ ಮಾಡುತ್ತಾರೆ ಎಂದು ಕಾಂಗ್ರೆಸ್‌ನವರೇ ತಮ್ಮ ತಲೆಗೆ ತಾವೇ ಹಣ ಕಟ್ಟಿಕೊಳ್ಳುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸಬೇಕು ಎನ್ನುವುದೇ ಆದರೆ 90 ಶಾಸಕರು ಬೇಕು. 90 ಶಾಸಕರಿಗೆ 100 ಕೋಟಿ ರೂ. ಇದೆಲ್ಲ ಸಾಧ್ಯವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ಸಿನವರಿಗೆ ಹೇಳುವುದಕ್ಕೆ ಯಾವುದೇ ಸರಿಯಾದ ಕೆಲಸ ಇಲ್ಲ. ಗ್ಯಾರಂಟಿ ಯೋಜನೆಗಳನ್ನೂ ಸಮರ್ಪಕವಾಗಿ ಜಾರಿಗೊಳಿಸಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.