Shiv sena:ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ.
Team Udayavani, Sep 16, 2024, 3:11 PM IST
ಮುಂಬೈ: ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ( Rahul Gandhi) ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಬೇಕೆಂದು ನೀಡಿದ್ದ ಹೇಳಿಕೆಗೆ ಪ್ರತೀಕಾರವಾಗಿ ಯಾರಾದರೂ ಗಾಂಧಿಯ ನಾಲಿಗೆಯನ್ನು ಕತ್ತರಿಸಿದರೆ ಅವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿರುವುದು ವಿವಾದಕ್ಕೀಡಾಗಿದೆ ಎಂದು ವರದಿ ತಿಳಿಸಿದೆ.
ಶಾಸಕ ಗಾಯಕ್ವಾಡ್ ಸವಾಲಿನ ಹೇಳಿಕೆಯನ್ನು ನಾವು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾನ್ ಕುಲೆ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನಾ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ.
ವಿದೇಶ ಪ್ರವಾಸದಲ್ಲಿದ್ದ ರಾಹುಲ್ ಗಾಂಧಿ, ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಕೊನೆಗಾಣಿಸುವುದು ನನ್ನ ಇಚ್ಛೆಯಾಗಿದೆ ಎಂದು ಹೇಳಿದ್ದರು. ಈ ಹೇಳಿಕೆ ಮೂಲಕ ಕಾಂಗ್ರೆಸ್ ನ ನಿಜವಾದ ಮುಖವಾಡ ಬಟಬಯಲಾಗಿದೆ ಎಂದು ಗಾಯಕ್ವಾಡ್ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಹುಮಾನ ಘೋಷಿಸಿದ್ದಾರೆ.
“ಯಾರೇ ಆಗಲಿ ರಾಹುಲ್ ಗಾಂಧಿಯ ನಾಲಿಗೆಯನ್ನು ಕತ್ತರಿಸಿದರೆ 11 ಲಕ್ಷ ರೂಪಾಯಿ ನೀಡುವುದಾಗಿ ಗಾಯಕ್ವಾಡ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಚುನಾವಣೆಯಲ್ಲಿ ಸೋಲಿಸಿತ್ತು ಎಂದು ಹೇಳಿದರು.
ನಾವು ಎಸ್ ಸಿ, ಎಸ್ ಟಿ ಮತ್ತು ಒಬಿಸಿ ವರ್ಗಗಳಿಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮನವರಿಕೆ ಮಾಡುತ್ತೇವೆ. ಅಲ್ಲದೇ ನೆಹರು, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಅಲ್ಲದೇ ಮರಾಠ ಮೀಸಲಾತಿ ಬಗ್ಗೆ ಸಾಮಾಜಿಕ ಹೋರಾಟಗಾರ ಮನೋಜ್ ಜರಾಂಗೆ ಈ ಬಗ್ಗೆ ಆಲೋಚಿಸಬೇಕು ಎಂದು ಗಾಯಕ್ವಾಡ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.