Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
ಸಿಎಂ ಸಿದ್ದರಾಮಯ್ಯ ಜೊತೆಗಿನ ಸಂಧಾನ ಸಭೆ ಬಳಿಕ ತೀರ್ಮಾನ
Team Udayavani, Nov 19, 2024, 6:17 PM IST
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಬಾರ್ ಮಾಲೀಕರ ಸಂಘ ನ.20 (ಬುಧವಾರ) ರಾಜ್ಯಾದ್ಯಂತ ಬಾರ್ ಬಂದ್‌ಗೆ ಕರೆ ನೀಡಿ ಪ್ರತಿಭಟನೆಗೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ (ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್) ದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾದ್ದರಿಂದ ಬಾರ್ ಬಂದ್ ಕರೆಯ ವಾಪಸ್ ಪಡೆಯಲು ನಿರ್ಧರಿಸಿದೆ.
ಮಂಗಳವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಕರುಣಾಕರ ಹೆಗ್ಡೆ ನೇತೃತ್ವದ ನಿಯೋಗವು ಮಾತುಕತೆ ನಡೆಸಿದ ಬಳಿಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನ.20 (ಬುಧವಾರ) ಬಾರ್ ಬಂದ್ ಕರೆ ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಬೇಡಿಕೆಗಳ ಆಲಿಸಿದ ಬಳಿಕ ಈ ಕುರಿತು ವರದಿ ನೀಡಲು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳಿಗೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಪ್ರತಿಕ್ರಿಯಿಸಿ ನಮ್ಮ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಸರ್ಕಾರ ಗಮನಹರಿಸಬೇಕೆಂದು ನಾಳೆ ರಾಜ್ಯವ್ಯಾಪಿ ಬಂದ್ ಗೆ ಕರೆ ಕೊಟ್ಟಿದ್ದೇವು. ಆದರೆ ಈಗ ನಮ್ಮ ಸಮಸ್ಯೆ ನಮ್ಮ ಕುಂದು ಕೊರತೆಗಳ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಹಾಗೆಯೇ ಎಸಿಎಸ್, ಕಮಿಷನರ್ ಗೆ ನಮ್ಮ ಬೇಡಿಕೆ ಕುರಿತು ವರದಿ ಕೊಡಲು ಹೇಳಿದ್ದು, ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಆದ್ದರಿಂದ ನ.20ರಂದು ಕರೆ ನೀಡಿದ್ದ ಬಾರ್ ಬಂದ್ ಕರೆ ವಾಪಸ್ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Kasaragod: ವಂದೇ ಭಾರತ್‌ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.