ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ?
Team Udayavani, Nov 8, 2021, 10:30 PM IST
ನವದೆಹಲಿ : ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ ನಡೆಸಲು ರಾಜಕೀಯ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಒಂದೂವರೆ ವರ್ಷಗಳಲ್ಲಿ ನಡೆದ ಅಧಿವೇಶನಗಳಲ್ಲಿ ಹೇಗೆ ಎಲ್ಲ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಲಾಗಿತ್ತೋ, ಈ ಬಾರಿಯೂ ಅದೇ ಮಾದರಿಯಲ್ಲಿ ಅಧಿವೇಶನ ನಡೆಸಲಾಗುತ್ತದೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಏಕಕಾಲಕ್ಕೆ ನಡೆಯಲಿದ್ದು, ಅಧಿವೇಶನದಲ್ಲಿ ಸುಮಾರು 20 ಸಿಟ್ಟಿಂಗ್‌ಗಳು ಇರಲಿವೆ ಎಂದೂ ಹೇಳಲಾಗಿದೆ.
ಮುಂದಿನ ವರ್ಷ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದಿದೆ. ಅಲ್ಲದೇ, ಹಣದುಬ್ಬರ, ತೈಲ ದರ ಏರಿಕೆ, ಖಾದ್ಯ ತೈಲದ ದರ ಹೆಚ್ಚಳ, ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ, ಲಖೀಂಪುರ ಖೇರಿ ಹಿಂಸಾಚಾರ, ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.
ಇದನ್ನೂ ಓದಿ : ಫ್ಲಾಯ್ಡ್ ಗೆ ಥಳಿಸಿದ ಮಾದರಿಯಲ್ಲಿ ವ್ಯಕ್ತಿಗೆ ಥಳಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.