ಗೃಹಿಣಿ ಆತ್ಮಹತ್ಯೆಗೆ ಹೊಸ ಟ್ವಿಸ್ಟ್ : ಸ್ಮ್ಯೂಲ್ ಸಿಂಗಿಂಗ್ ಗೀಳಿಗೆ ಬಲಿಯಾದ ಗೃಹಿಣಿ
Team Udayavani, Sep 28, 2019, 6:01 PM IST
ಚಿಕ್ಕಬಳ್ಳಾಪುರ: ಸ್ಮ್ಯೂಲ್ ಸಿಂಗಿಂಗ್ ಗೀಳು ಬೆಳೆಸಿಕೊಂಡಿದ್ದ ಗೃಹಿಣಿಯೊಬ್ಬರು ಸ್ಮ್ಯೂಲ್ ಸಿಂಗಿಂಗ್ ನಲ್ಲಿ ಪರಿಚಯವಾಗಿದ್ದ ಯುವಕ ತನ್ನೊಂದಿಗೆ ಹಾಡುತ್ತಿಲ್ಲ ಎಂದು ಮನನೊಂದು ಆತ್ಮಹತ್ಯೆಗೀಡಾಗಿದ್ದು ಗೃಹಿಣಿಯ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ರೂಪ ಪಡೆದುಕೊಂಡಿದೆ.
ಆತ್ಮಹತ್ಯೆ ಮಾಡಿಕೊಂಡು ಚಿಕ್ಕಬಳ್ಳಾಪುರ ನಗರದ ನಿವಾಸಿ ಶಿಲ್ಪಾ (35) ಸ್ಮ್ಯೂಲ್ ಸಿಂಗಿಂಗ್ ಗೀಳು ಬೆಳೆಸಿಕೊಂಡು ಅದರ ಆ್ಯಪ್ ನಲ್ಲಿ ಹಾಸನ ಮೂಲದ ದೇವರಾಜ್ ಎಂಬಾತನ ಜೊತೆಗೆ ಆಗಾಗ ಹಾಡುತ್ತಿದ್ದರು. ಆದರೆ ಕಳೆದ ಶುಕ್ರವಾರ ರಾತ್ರಿ ಶಿಲ್ಪಾ ಜೊತೆಗೆ ದೇವರಾಜ್ ಸ್ಮ್ಯೂಲ್ ಸಿಂಗಿಂಗ್ ನಲ್ಲಿ ಹಾಡದೇ ದೂರ ಉಳಿದ್ದಕ್ಕೆ ಆಕೆ ಮನನೊಂದು ಗಂಡ, ಇಬ್ಬರು ಮಕ್ಕಳನ್ನು ಬಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಾಟಿಂಗ್ ಮಾಡಿದ್ದಾಳೆ
ಶುಕ್ರವಾರ ತಡರಾತ್ರಿ ಶಿಲ್ಪಾ, ಯುವಕನಿಗೆ ಫೇಸ್‍ಬುಕ್ ಮೆಸೆಂಜರ್ ಮೂಲಕ ಕರೆ ಮಾಡಿದ್ದಾಗ ಆತ ಕರೆ ಸ್ವೀಕರಿಸಿಲ್ಲ. ಕೊನೆಗೆ ತನ್ನನ್ನು ನೀನು ದೂರ ಮಾಡುತ್ತಿದ್ದೀಯಾ ಎಂದು ಮೆಸೇಜ್ ಮಾಡಿದ್ದಾಳೆ. ಹೀಗೆ ಇಬ್ಬರ ನಡುವೆ ಚಾಟಿಂಗ್ ಸಾಕಷ್ಟು ಬಾರಿ ಮುಂದುವರಿದಿದೆ. ಆದರೆ ಸ್ಮ್ಯೂಲ್ ಆ್ಯಪ್ ನಲ್ಲಿ ಪರಿಚಯವಾಗಿದ್ದ ದೇವರಾಜ್ ನಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದಕ್ಕೆ ಶಿಲ್ಪಾ ನೇಣಿಗೆ ಕೊರಳೊಡ್ಡಿದ್ದಾಳೆ.
ಗಂಡ ಮನೆಯಲ್ಲಿ ಇರಲಿಲ್ಲ..
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿಲ್ಪಾ ಕಳೆದ ರಾತ್ರಿ ಮನೆಯಲ್ಲಿ ಒಬ್ಬಳೇ ಇದ್ದಳು, ಗಂಡ ಶಿವಾನಂದ ಬೇರೆ ಊರಿಗೆ ಹೋಗಿದ್ದ, ಈ ಘಟನೆ ವೇಳೆ ಊರಿಗೆ ಹೋಗಿದ್ದ, ಶಿಲ್ಪಾ ಪತಿ ಶನಿವಾರ ಬೆಳಗ್ಗೆ ಪತ್ನಿಗೆ ಕರೆ ಮಾಡಿದ್ದಾರೆ. ಪತ್ನಿ ಕರೆ ಸ್ವೀಕರಿಸದಿದ್ದಕ್ಕೆ ಅನುಮಾನಗೊಂಡ ಪತಿ ಮನೆ ಮಾಲೀಕನಿಗೆ ವಿಷಯ ತಿಳಿಸಿದ್ದಾರೆ. ಮನೆಯ ಬಾಗಿಲು ಒಡೆದು ನೋಡಿದ್ದಾಗ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಒಟ್ಟಿನಲ್ಲಿ ಸ್ಮ್ಯೂಲ್ ಸಿಂಗಿಂಗ್ ಗೀಳು ಬೆಳೆಸಿಕೊಂಡಿದ್ದ ಶಿಲ್ಪಾ ಇದೀಗ ಆತ್ಮಹತ್ಯೆಗೆ ಶರಣಾಗಿದ್ದು ತನ್ನ ಇಬ್ನರು ಮಕ್ಕಳನ್ನು ತಬ್ಬಲಿಗಳಾಗಿ ಮಾಡಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.