Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್
ಮಹಿಳೆಯರ ಸುರಕ್ಷೆಗಾಗಿ 2020ರ ಡಿಸೆಂಬರ್‌ನಲ್ಲಿ ಆರಂಭವಾಗಿದ್ದ ಯೋಜನೆ
Team Udayavani, Oct 20, 2024, 7:35 AM IST
ಸುಳ್ಯ: ಮಹಿಳೆ ಮತ್ತು ಮಕ್ಕಳ ಸುರಕ್ಷೆ ಉದ್ದೇಶದಿಂದ ತರಲಾಗಿದ್ದ ನಿರ್ಭಯ ಪೊಲೀಸ್ ಬೈಕ್‌ಗಳು ಗ್ರಾಮೀಣ ಭಾಗದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಜತೆಗೆ ಬಳಕೆಯಾಗುತ್ತಿರುವ ಕೆಲವು ನೈಜ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ.
2020ರ ಡಿಸೆಂಬರ್‌ನಲ್ಲಿ ನಿರ್ಭಯ ಪೊಲೀಸ್ ಬೈಕನ್ನು ರಾಜ್ಯದಲ್ಲಿ ಆರಂಭಿಸಲಾಗಿತ್ತು. ಮಾನವ ಕಳ್ಳ ಸಾಗಣೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಮಾಡುವ, ಕಾನೂನು ಸುವ್ಯವಸ್ಥೆ ಕರ್ತವ್ಯ ನಿರ್ವಹಿಸಲು, ಅಪಘಾತ ಸಂದರ್ಭದಲ್ಲಿ ಸ್ಥಳಕ್ಕೆ ಕ್ಷಿಪ್ರಗತಿಯಲ್ಲಿ ತಲುಪಲು ಮುಂತಾದ ಹಲವು ಉದ್ದೇಶಗಳಿಗಾಗಿ ಬೈಕನ್ನು ನೀಡಲಾಗಿತ್ತು. ಯೋಜನೆ ಹಲವೆಡೆ ಉತ್ತಮವಾಗಿದ್ದರೆ, ಗ್ರಾಮೀಣ ಭಾಗದಲ್ಲಿ ಹಳಿ ತಪ್ಪಿದೆ ಎನ್ನಲಾಗುತ್ತಿದೆ.
36 ನಿರ್ಭಯ ಬೈಕ್
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 36 ನಿರ್ಭಯ ಬೈಕ್‌ಗಳಿವೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ 14 ಠಾಣೆಗಳಿಗೆ ನಿರ್ಭಯ ಬೈಕ್‌ಗಳನ್ನು ನೀಡಲಾಗಿದೆ. ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ವೇಣೂರು, ಬೆಳ್ತಂಗಡಿ ನಗರ, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ, ಸುಳ್ಯ, ಪುತ್ತೂರು ಗ್ರಾಮಾಂತರ, ಪುತ್ತೂರು ನಗರ, ಧರ್ಮಸ್ಥಳ ಪೊಲೀಸ್ ಠಾಣೆಗಳಿಗೆ ಒಂದೊಂದು ಬೈಕ್ ಒದಗಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ 22 ಬೈಕ್‌ಗಳನ್ನು ನೀಡಲಾಗಿದೆ. ಉಡುಪಿ ನಗರ ಠಾಣೆ, ಮಲ್ಪೆ, ಮಣಿಪಾಲ, ಮಹಿಳಾ ಠಾಣೆ, ಬ್ರಹ್ಮಾವರ, ಹಿರಿಯಡಕ, ಕೋಟ, ಕುಂದಾಪುರ, ಕುಂದಾಪುರ ಗ್ರಾಮಾಂತರ, ಅಮಾಸೆಬೈಲು, ಶಂಕರನಾರಾಯಣ, ಬೈಂದೂರು, ಗಂಗೊಳ್ಳಿ, ಕೊಲ್ಲೂರು, ಕಾಪು, ಶಿರ್ವ, ಪಡುಬಿದ್ರಿ, ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಅಜೆಕಾರು, ಹೆಬ್ರಿ ಠಾಣೆಗಳಿಗೆ ತಲಾ ಒಂದೊಂದು ಬೈಕ್ ಒದಗಿಸಲಾಗಿತ್ತು. ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಗೂ ನಿರ್ಭಯ ಬೈಕ್‌ಗಳನ್ನು ಒದಗಿಸಲಾಗಿತ್ತು.
ಕಾರ್ಯಾಚರಿಸುತ್ತಿಲ್ಲ ನಿರ್ಭಯ ಬೈಕ್?
ಶಾಲಾ-ಕಾಲೇಜು ಆರಂಭ ಹಾಗೂ ಮನೆಗೆ ಬಿಡುವ ಸಂದರ್ಭದಲ್ಲಿ ವಿದ್ಯಾಸಂಸ್ಥೆ ವ್ಯಾಪ್ತಿಯಲ್ಲಿ, ಬಸ್ ನಿಲ್ದಾಣಗಳಲ್ಲಿ ನಿರ್ಭಯ ಬೈಕ್ ಮೂಲಕ ಗಸ್ತು ಕೈಗೊಳ್ಳಬೇಕಿದೆ. ಇವುಗಳ ಬಗ್ಗೆ ಜನರಲ್ಲಿ ಮಾಹಿತಿಯೇ ಇಲ್ಲ. ಹಾಗಾಗಿ ಬಹುತೇಕ ಬೈಕ್‌ಗಳು ಠಾಣೆಯ ಶೆಡ್‌ಗಳಲ್ಲೇ ಇವೆ. ಹಾಗಾಗಿ ನೈಜ ಉದ್ದೇಶಕ್ಕೆ ಬೈಕ್‌ಗಳನ್ನು ಬಳಸುವಂತೆ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ.
“ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ದೂರುಗಳು ಬಂದಾಗ ಅಲ್ಲಿಗೆ ತೆರಳಲು, ಶಾಲಾ-ಕಾಲೇಜು ಸಮಯದಲ್ಲಿ ಗಸ್ತು ತಿರುಗಲು ನಿರ್ಭಯ ಬೈಕ್‌ಗಳನ್ನು ಬಳಸಬಹುದು. ನಗರ ಭಾಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಶಾಲಾ-ಕಾಲೇಜುಗಳು ದೂರದಲ್ಲಿರುವುದರಿಂದ ಒಂದು ಠಾಣೆಯ ಒಂದು ಬೈಕ್‌ನಲ್ಲಿ ಗಸ್ತು ಕಷ್ಟವಾಗಬಹುದು. ಆ ಬಗ್ಗೆ ಯೋಚಿಸಿ ನಿರ್ಭಯ ಬೈಕ್ ಪರಿಣಾಮಕಾರಿ ಬಳಕೆಗೆ ಆದೇಶಿಸಲಾಗುವುದು.”
– ಯತೀಶ್ ಎನ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ದ. ಕ. ಜಿಲ್ಲೆ
“ಉಡುಪಿ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ 22 ನಿರ್ಭಯ ಬೈಕ್‌ಗಳನ್ನು ನೀಡಲಾಗಿದೆ. ಮಹಿಳೆ, ಮಕ್ಕಳ ರಕ್ಷಣೆ ಜತೆಗೆ ಕಾನೂನು ಸುವ್ಯವಸ್ಥೆ ಸಂದರ್ಭ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಇನ್ನಷ್ಟು ಪರಿಣಾಮಕಾರಿ ಜಾರಿಗೆ ನಿರ್ದೇಶನ ನೀಡಲಾಗುವುದು.”
– ಡಾ| ಅರುಣ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಡುಪಿ ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.