ಮಾನಸಿಕ ಅನಾರೋಗ್ಯ: ನಿರ್ಲಕ್ಷ್ಯ ಸಲ್ಲದು

ವಿಶ್ವ ಮಾನಸಿಕ ಆರೋಗ್ಯ ದಿನ

Team Udayavani, Oct 10, 2020, 4:48 PM IST

ಮಾನಸಿಕ ಅನಾರೋಗ್ಯ: ನಿರ್ಲಕ್ಷ್ಯ ಸಲ್ಲದು

ದೇಹ ಮತ್ತು ಮನಸ್ಸು ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡು ಆರೋಗ್ಯವಾಗಿದ್ದಾಗ ಮಾತ್ರ ಮನುಷ್ಯನ ಜೀವನ ಅರ್ಥಪೂರ್ಣ. ಜೀವನಕ್ಕೆ ನೆಲೆ- ಬೆಲೆ ನೀಡುವ “ಮಾನಸಿಕ ಆರೋಗ್ಯ’ ಅತ್ಯಗತ್ಯವಾಗಿದ್ದು, ಸದೃಢ ಬದುಕನ್ನು ಕಟ್ಟಿಕೊಳ್ಳಲು ಮುಖ್ಯವಾಗಿದೆ. ಇದೇ ಉದ್ದೇಶದಿಂದ ಮಾನಸಿಕ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರತೀ ವರ್ಷದ ಅ. 10ರಂದು ವಿಶ್ವ ಮಾನಸಿಕ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನ ಪ್ರಾರಂಭವಾದದ್ದು ಹೇಗೆ? ಈ ವರ್ಷದ ಧ್ಯೇಯ ವಾಕ್ಯ ಏನು? ಯಾವ ಕಾರಣಕ್ಕಾಗಿ ಮಾನಸಿಕ ಅನಾರೋಗ್ಯ ಕಾಡುತ್ತದೆ? ಎಂಬ ವಿಷಯಗಳ ಬಗ್ಗೆ ಮಾಹಿತಿ ಇಲ್ಲಿದೆ.

1992 ರಲ್ಲಿ ಆರಂಭ
1990 ರ ದಶಕದಲ್ಲಿ ಅತೀ ಹೆಚ್ಚಿನ ಜನರು ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆ ಸಮಸ್ಯೆಯ ಆಳವನ್ನು ಅರಿತ ವರ್ಲ್ಡ್ ಫೆಡರೇಶನ್‌ ಆಫ್ ಮೆಂಟಲ್‌ ಹೆಲ್ತ್ 1992ರ ಅಕ್ಟೋಬರ್‌ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆಗೆ ನಾಂದಿ ಹಾಡಿತು.

ಇದನ್ನೂ ಓದಿ:ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ ಪಿಎಂ ನರೇಂದ್ರ ಮೋದಿ ಸಿನಿಮಾ

ಎಲ್ಲರಿಗೂ ಮಾನಸಿಕ ಆರೋಗ್ಯ
ಕೋವಿಡ್‌ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹಾಗೂ ಮಾನಸಿಕವಾಗಿ ಪರಸ್ಪರ ಬೆಂಬಲ ನೀಡುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿಯೇ “ಎಲ್ಲರಿಗೂ ಮಾನಸಿಕ ಆರೋಗ್ಯ” ಎಂಬುದನ್ನು ಈ ವರ್ಷದ ವಿಶ್ವ ಮಾನಸಿಕ ಆರೋಗ್ಯ ದಿನದ ಧ್ಯೇಯವಾಕ್ಯ ಎಂದು ಘೋಷಿಸಲಾಗಿದೆ.

ಶತಕೋಟಿ ಮಾನಸಿಕ ಅಸ್ವಸ್ಥರು
ಜಾಗತಿಕವಾಗಿ ಒಂದು ಶತಕೋಟಿ ಜನರಿಗೆ ಮಾನಸಿಕ ಅಸ್ವಾಸ್ಥ್ಯ ಸಮಸ್ಯೆ ಇದ್ದು, ತೀವ್ರ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿರುವವರು ಸಾಮಾನ್ಯ ಜೀವಿತಾವಧಿಗಿಂತ 10ರಿಂದ 20 ವರ್ಷ ಬೇಗ ಸಾವನ್ನಪ್ಪುತ್ತಾರೆ.

ಪ್ರತೀ ವರ್ಷ 8ಲಕ್ಷ ಜನರು ಆತ್ಮಹತ್ಯೆ
ಪ್ರಪಂಚಾದ್ಯಂತ ಪ್ರತಿ 40 ಸೆಕೆಂಡಿಗೆ ಓರ್ವ ವ್ಯಕ್ತಿಯಂತೆ ಪ್ರತೀ ವರ್ಷ ಸುಮಾರು 8 ಲಕ್ಷ ಜನರು ಮಾನಸಿಕ ಅಸ್ವಾಸ್ಥ್ಯ ಸಮಸ್ಯೆಯ ಕಾರಣದಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಪೈಕಿ 15-29ರ ಹರೆಯದವರ ಪ್ರಮಾಣವೇ ಹೆಚ್ಚಿದೆ. ಜತೆಗೆ ಈ ವಯೋಮಾನದ ಯುವಜನರ ಸಾವಿಗೆ ಮಾನಸಿಕ ಅಸ್ವಾಸ್ಥ್ಯ ಎರಡನೇ ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ:ಕೋವಿಡ್ ಹೆಡೆಮುರಿ ಕಟ್ಟಿದ ಜಿಲ್ಲೆ ಜನ : ಸೋಂಕು, ಸಾವಿನ ಪ್ರಮಾಣ ಗಣನೀಯ ಇಳಿಕೆ

ಶೇ.75 ರಷ್ಟು ಜನರು ಚಿಕಿತ್ಸೆ ಪಡೆಯುವುದಿಲ್ಲ
ವಿಶ್ವಾದ್ಯಂತ ಕೆಲವೇ ಕೆಲವು ಜನರಿಗೆ ಗುಣಮಟ್ಟದ ಮಾನಸಿಕ ಆರೋಗ್ಯ ಚಿಕಿತ್ಸಾ ಸೌಲಭ್ಯಗಳು ದೊರೆಯುತ್ತಿವೆ. ಆದರೆ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ಮಾನಸಿಕ, ನರವೈಜ್ಞಾನಿಕ ಮತ್ತು ಮಾದಕವಸ್ತು ಬಳಕೆಯ ಅಸ್ವಾಸ್ಥ್ಯದಿಂದ ಬಳಲುತ್ತಿರುವ ಶೇ.75ಕ್ಕಿಂತ ಹೆಚ್ಚು ಮಂದಿ ತಮ್ಮ ಸಮಸ್ಯೆಗಳಿಗೆ ಯಾವುದೇ ಚಿಕಿತ್ಸೆ ಪಡೆಯುತ್ತಿಲ್ಲ.

ಶೇ. 7.5ರಷ್ಟು ಭಾರತೀಯರು!
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಭಾರತದಲ್ಲಿ 90 ದಶಲಕ್ಷಕ್ಕೂ ಹೆಚ್ಚು ಜನರು ಅಥವಾ ಶೇ.7.5ರಷ್ಟು ಮಂದಿ ನಾನಾ ರೀತಿಯ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ದೇಶದಲ್ಲಿ 6 ಜನರಲ್ಲಿ ಓರ್ವರಿಗೆ ಮಾನಸಿಕ ಆರೋಗ್ಯದ ಸಮಸ್ಯೆಗಳು ಕಾಡುತ್ತಿವೆ ಎಂಬುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ.

ಮಹಿಳೆಯರ ಪಾಲು ಜಾಸ್ತಿ
ಮಾನಸಿಕ ಅಸ್ವಾಸ್ಥ್ಯಕ್ಕೆ ಒಳಗಾಗುವವರ ಪೈಕಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಎನ್ನುವ ಅಂಶ ಸಾಬೀತಾಗಿದ್ದು, ಶೇ.23 ರಷ್ಟು ಮಹಿಳೆಯರು ಮಾನಸಿಕ ಅನಾರೋಗ್ಯದಿಂದ ಬಳಲುತ್ತಿ¨ªಾರೆ. ಶೇ.18ರಷ್ಟು ಪುರುಷರನ್ನು ಮಾನಸಿಕ ಅನಾರೋಗ್ಯ ಕಾಡುತ್ತಿದೆ.

ಇದನ್ನೂ ಓದಿ:ಸಮಾಧಿಯಲ್ಲಿ ಕುಳಿತು ಕಬ್ಬಿನ ಬಾಕಿ ಬಿಲ್ ಗೆ ಆಗ್ರಹಿಸಿ ರೈತನ ಪ್ರತಿಭಟನೆ!

ಕಾರಣವೇನು?
ಮಾನಸಿಕ ಅನಾರೋಗ್ಯಕ್ಕೆ ಮುಖ್ಯವಾಗಿ ಖನ್ನತೆ ಕಾರಣವಾಗಿದ್ದು, ಒತ್ತಡ, ನಿರ್ಲಕ್ಷ್ಯ, ಏಕಾಂಗಿತನ, ತಾರತಮ್ಯ, ಕಳಂಕ ಮುಂತಾದ ಸಾಮಾಜಿಕ ತೊಂದರೆ ತಾಪತ್ರಯಗಳು ಇನ್ನಿತರ ಕಾರಣಗಳಾಗಿವೆ.

ಪರಿಹಾರವೇನು?
– ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು.
– ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚಾಗಿ ಕಾಲ ಕಳೆಯುವುದು.
– ಖುಷಿ ನೀಡುವ ಕೆಲಸಗಳಲ್ಲಿ ನಿರತರಾಗುವುದು.
– ಆರೋಗ್ಯಕರ ಆಹಾರ ಸೇವನೆ ಮಾಡುವುದರೊಂದಿಗೆ ಸದಾ ಕ್ರಿಯಾಶೀಲತೆಯಿಂದ ಇರುವುದು.

ಟಾಪ್ ನ್ಯೂಸ್

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

Kiwi player will be away from Test cricket after the England series

Test: ಇಂಗ್ಲೆಂಡ್‌ ಸರಣಿಯ ಬಳಿಕ ಟೆಸ್ಟ್‌ ಕ್ರಿಕೆಟ್‌ ನಿಂದ ದೂರವಾಗಲಿದ್ದಾರೆ ಕಿವೀಸ್‌ ಆಟಗಾರ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ಯಕ್ಷಗಾನದ ಕನ್ನಡ ಭಾಷಾ ಸಂಪದ ಉಳಿಸಿ, ಬೆಳೆಸೋಣ

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ರಾಷ್ಟ್ರೀಯ ಆರ್ಥಿಕ ಉತ್ಥಾನದ ಪದದರ್ಶಿ ಸಹಕಾರಿ ಸಂಸ್ಥೆಗಳು

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.