ವಿಶ್ವದ ಅತಿ ಎತ್ತರದ ಇವಿ ಚಾರ್ಜಿಂಗ್ ಕೇಂದ್ರ
ಹೀರೋ ಸಂಸ್ಥೆ ಈಗಾಗಲೇ 1,650 ಚಾರ್ಜಿಂಗ್ ಕೇಂದ್ರ ಸ್ಥಾಪಿಸಿದೆ.
Team Udayavani, Sep 25, 2021, 10:00 AM IST
ಶಿಮ್ಲಾ: ದೇಶದಲ್ಲಿ ವಿದ್ಯುತ್‌ಚಾಲಿತ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಅಲ್ಲಲ್ಲಿ ಚಾರ್ಜಿಂಗ್ ಕೇಂದ್ರಗಳೂ ತೆರೆಯಲಾರಂಭಿಸಿವೆ. ಹಾಗೆಯೇ ಹಿಮಾಚಲ ಪ್ರದೇಶದ ಲಾಹಾಲ್ ಮತ್ತು ಸ್ಪಿತಿ ಜಿಲ್ಲೆಯ ಕಾಜಾ ಪ್ರದೇಶದಲ್ಲಿ ವಿಶ್ವದ ಅತ್ಯಂತ ಎತ್ತರದ ಚಾರ್ಜಿಂಗ್ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಕಾಜಾದಲ್ಲಿ 500 ಅಡಿ ಎತ್ತರದಲ್ಲಿ ಚಾರ್ಜಿಂಗ್ ಕೇಂದ್ರ ನಿರ್ಮಿಸಲಾಗಿದೆ. ಈ ಪ್ರದೇಶಕ್ಕೆ ಇದು ಮೊದಲನೇ ಚಾರ್ಜಿಂಗ್ ಕೇಂದ್ರವಾಗಿದ್ದು, ಒಳ್ಳೆಯ ಸ್ಪಂದನೆ ಸಿಕ್ಕರೆ ಇನ್ನಷ್ಟು ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕಾಜಾ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಮಹೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಇದೇ ವೇಳೆ, ಪರಿಸರ ಮಾಲಿನ್ಯ ತಡೆಗಟ್ಟಲು ಎಲೆಕ್ಟ್ರಾನಿಕ್ ವಾಹನ ಬಳಸಿ ಎಂದು ಜಾಗೃತಿ ಮೂಡಿಸಲು ಇಬ್ಬರು ಮಹಿಳೆಯರು ಮನಾಲಿಯಿಂದ ಕಾಜಾಕ್ಕೆ (183ಕಿ.ಮೀ) ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದಿದ್ದರು. ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ದೂರು ಸಾಗುವುದಿಲ್ಲ ಎನ್ನುವ ಅಪನಂಬಿಕೆ ಹೋಗಲಾಡಿಸಲೆಂದು ನಾವು ಈ ಪ್ರಯಾಣ ಮಾಡಿದೆವೆಂದು ಅವರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಹೇರ್‌ಕಟ್ ಎಡವಟ್ಟು; 2 ಕೋಟಿ ರೂ.ನಷ್ಟ ತುಂಬಬೇಕಾದ ಸೆಲೂನ್
ಶೀಘ್ರ 10000 ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ
ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇನ್ನು ಕೆಲ ತಿಂಗಳುಗಳಲ್ಲಿ ದೇಶಾದ್ಯಂತ 10 ಸಾವಿರ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದಾಗಿ ಹೀರೋ ಎಲೆಕ್ಟ್ರಿಕ್ ಸಂಸ್ಥೆ ಹೇಳಿಕೊಂಡಿದೆ. ಮಾಸಿವ್ ಮೊಬಿಲಿಟಿ ಸಂಸ್ಥೆಯೊಂದಿಗೆ ಜಂಟಿಯಾಗಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಹೀರೋ ಸಂಸ್ಥೆ ಈಗಾಗಲೇ 1,650 ಚಾರ್ಜಿಂಗ್ ಕೇಂದ್ರ ಸ್ಥಾಪಿಸಿದೆ. 2022ರ ಅಂತ್ಯದೊಳಗೆ ಅದನ್ನು 20 ಸಾವಿರಕ್ಕೆ ಏರಿಸುವ ಗುರಿ ಹೊಂದಿದೆ ಎಂದು ಹೀರೋ ಎಲೆಕ್ಟ್ರಿಕ್ ಸಂಸ್ಥೆಯ ಮುಖ್ಯಸ್ಥ ಸೊಹಿಂದರ್ ಗಿಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.