ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್‌; ಮಳೆ ನಿರೀಕ್ಷೆ

Team Udayavani, Mar 23, 2022, 8:35 AM IST

ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್‌; ಮಳೆ ನಿರೀಕ್ಷೆ

ಮಂಗಳೂರು/ಉಡುಪಿ: ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆ “ಯಲ್ಲೋ ಅಲರ್ಟ್‌’ ಘೋಷಿಸಿದೆ. ದ.ಕ. ಜಿಲ್ಲೆಯ ಕೆಲವು ಭಾಗಗಳಲ್ಲಿ ಸೋಮವಾರ ಮಧ್ಯರಾತ್ರಿ ಮತ್ತು ಮಂಗಳವಾರ ಸಾಧಾರಣ ಮಳೆಯಾಗಿದೆ. ಉಡುಪಿ ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣವಿತ್ತು.

ಧರ್ಮಸ್ಥಳ, ಗುರುವಾಯನಕರೆ, ನೆರಿಯ, ಬೆಳ್ತಂಗಡಿ, ಉಜಿರೆ, ಗಂಡಿಬಾಗಿಲು, ಮಂಗಳೂರು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಮಳೆ ಆರಂಭವಾಗಿತ್ತು. ಅಳದಂಗಡಿ, ನಾರಾವಿ ಸುತ್ತಮುತ್ತ ಮಂಗಳವಾರ ಮಳೆಯಾಗಿದೆ. ಬಂಟ್ವಾಳದ ಹಲವೆಡೆ ಸಾಧಾರಣ ಮಳೆಯಾಗಿದೆ. ರಾತ್ರಿ 1ರ ಸುಮಾರಿಗೆ ಹನಿ ಮಳೆ ಕಾಣಿಸಿ ಕೊಂಡು ನಿಂತಿದ್ದು, ಬಳಿಕ ಸ್ವಲ್ಪ ಹೊತ್ತು ಮಳೆ ಸುರಿದಿತ್ತು

ಕೆಲವು ದಿನಗಳಿಂದ ದ.ಕ.ದಲ್ಲಿ ಸೆಕೆಯ ಬೇಗೆ ಹೆಚ್ಚಿದ್ದು, ಗರಿಷ್ಠ ಉಷ್ಣಾಂಶವೂ ಏರಿಕೆ ಕಾಣುತ್ತಿದೆ. ಐಎಂಡಿ ಮಾಹಿತಿ ಯಂತೆ ಮಂಗಳೂರಿನಲ್ಲಿ ಮಂಗಳವಾರದಂದು 31.9 ಡಿ.ಸೆ. ಗರಿಷ್ಠ ಮತ್ತು 22.4 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಕ್ಕಾರು: ಸಿಡಿಲಿನಿಂದ 3 ಮನೆಗೆ ಹಾನಿ
ಬಜಪೆ: ಎಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ 3.30ರ ವೇಳೆಗೆ ಮಿಂಚು ಸಿಡಿಲು
ಸಹಿತ ಉತ್ತಮ ಮಳೆಯಾಗಿದ್ದು ಮೂರು ಮನೆಗಳಿಗೆ ಹಾನಿಯಾಗಿದೆ.

ಕಟಾವು ಮಾಡಿದ ಭತ್ತ ವನ್ನು ಗೋಣಿಚೀಲದಲ್ಲಿ ತುಂಬಿಸಿ ಗದ್ದೆಯಲ್ಲೇ ಇರಿಸಿದ್ದ ಕೃಷಿಕನಿಗೆ ನಷ್ಟವಾಗಿದೆ. ತೆಂಕ ಎಕ್ಕಾರು ಗ್ರಾಮದ ತುಕಾರಾಮ ಶೆಟ್ಟಿ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ವಿದ್ಯುತ್‌ ವಯರಿಂಗ್‌, ಎಲೆಕ್ಟ್ರಾನಿಕ್‌ ಮತ್ತು ಎಲೆಕ್ಟ್ರಿಕಲ್‌ ಸಾಮಗ್ರಿಗಳು ಹಾನಿಗೀಡಾಗಿವೆ. ಸಿಡಿಲಿನಿಂದಾಗಿ ಸಮೀಪದ ಎರಡು ಮನೆಗಳಿಗೂ ಹಾನಿಯಾಗಿದೆ.

ತಾಂಗಾಡಿಯ ಕೃಷಿಕರಾದ ಗಂಪದ ಬೈಲು ಭಾಸ್ಕರ್‌ ಮೂಲ್ಯ, ಪಲ್ಲದ ಕೋಡಿ ನಾರಾಯಣ ಗೌಡ, ಸುಂದರ ಗೌಡ ಅವರು ಗದ್ದೆಗಳಲ್ಲಿ ಯಂತ್ರದ ಮೂಲಕ ಕಟಾವು ಮಾಡಿ ಭತ್ತವನ್ನು ಗೋಣಿ ಚೀಲದಲ್ಲಿ ತುಂಬಿಸಿ ಗದ್ದೆಯಲ್ಲಿಯೇ ಇಡಲಾಗಿತ್ತು. ರಾತ್ರಿ ಸುರಿದ ಅಕಾಲಿಕ ಮಳೆಯಿಂದಾಗಿ ಸುಮಾರು 35 ಗೋಣಿ ಚೀಲಗಳು ಸಂಪೂರ್ಣ ಒದ್ದೆಯಾಗಿವೆ.

ಟಾಪ್ ನ್ಯೂಸ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.