Heart Attack: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಹೃದಯಾಘಾತಕ್ಕೊಳಗಾಗಿ ಮೃತ್ಯು!
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
Team Udayavani, Jan 31, 2024, 3:32 PM IST
ಲಖೀಂಪುರ್ ಖೇರಿ(ಲಕ್ನೋ): ದೇಶಾದ್ಯಂತ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಯುವಕರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೊಂದು ಸೇರ್ಪಡೆ ಎಂಬಂತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿರುವ ಘಟನೆ ಉತ್ತರಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Varanasi; ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅವಕಾಶ ನೀಡಿದ ಕೋರ್ಟ್
ಸುಮಿತ್ ಮೌರ್ಯ (22ವರ್ಷ) ಎಂಬ ಯುವಕ ಕೈಯಲ್ಲೊಂದು ಬ್ಯಾಗ್ ಹಿಡಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ದಿಢೀರನೆ ರಸ್ತೆ ಮೇಲೆ ಪ್ರಜ್ಞೆತಪ್ಪಿ ಬಿದ್ದಿರುವ ದೃಶ್ಯ ವಿಡಿಯೋದಲ್ಲಿದೆ. ಅಲ್ಲದೇ ಯುವಕ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಕಾರೊಂದು ಬರುತ್ತಿದ್ದು, ಆತ ಕುಸಿದು ಬಿದ್ದ ವೇಳೆ ಕಾರು ಆತನ ತಲೆಗೆ ಡಿಕ್ಕಿ ಹೊಡೆದ ಘಟನೆ ನಡೆದಿತ್ತು.
22 साल का नौजवान सुमित मौर्य सड़क पर चलते–चलते बेहोश होकर गिरा, तभी एक कार रौंदकर निकल गई। सिर में चोट लगने से सुमित की मौत हुई। संभवतः हार्टअटैक आया था।
📍लखीमपुर खीरी, उत्तर प्रदेश pic.twitter.com/lXf0xT0ZzA— Sachin Gupta (@SachinGuptaUP) January 31, 2024
ಅಗಲ ಕಿರಿದಾದ ಮತ್ತು ಜನಸಂದಣಿಯ ದಾರಿಯಲ್ಲಿ ಕೆಂಪು ಬಣ್ಣದ ಎಸ್ ಯುವಿ ಕಾರು ಬರುತ್ತಿದ್ದ ವೇಳೆ ಸುಮಿತ್ ದಿಢೀರನೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದ. ಈ ವೇಳೆ ಎಸ್ ಯುವಿ ಮುಂಭಾಗ ಸುಮಿತ್ ತಲೆಗೆ ಹೊಡೆದ ಪರಿಣಾಮ ಗಾಯವಾಗಿತ್ತು. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!
Military ವಾಹನವೀಗ ಹೊಟೇಲ್: 1 ದಿನದ ವಾಸಕ್ಕೆ 10,000 ರೂ.!
CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.