KSRTC ನೌಕರರಿಗೆ 1 ಕೋಟಿ ರೂ.ವಿಮಾ ಯೋಜನೆ
ಸಾರಿಗೆ ಸಂಸ್ಥೆ ಸಿಬಂದಿ ಕುಟುಂಬಕ್ಕೆ ಆಸರೆ - ದೇಶದಲ್ಲೇ ಪ್ರಥಮ ಬಾರಿ ಕಾರ್ಮಿಕ ಕಲ್ಯಾಣ ಯೋಜನೆಯಡಿ ವಿಮೆ ಜಾರಿ
Team Udayavani, Jul 16, 2023, 7:26 AM IST
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸ ಕಾರ್ಯವೊಂದಕ್ಕೆ ಮುನ್ನುಡಿ ಬರೆದಿದ್ದು, ಸಂಸ್ಥೆಯ ನೌಕಕರ ಕುಟುಂಬಸ್ಥರಿಗೆ ಆಸರೆಯಾಗುವ ವಿಮೆ ಯೋಜನೆಯೊದನ್ನು ಆರಂಭಿಸಿದೆ.
ದೇಶದಲ್ಲಿಯೇ ಪ್ರಥಮ ಬಾರಿಗೆ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬಂದಿಗೆ 1 ಕೋಟಿ ರೂ.ಮೊತ್ತದ ಅಪಘಾತ ವಿಮೆ ಜಾರಿಗೊಳಿಸುವ ಮೂಲಕ ಕೆಎಸ್ಆರ್ಟಿಸಿ ಮತ್ತೂಂದು ಮೈಲುಗಲ್ಲು ಸ್ಥಾಪಿಸಿದೆ. ಈ ಯೋಜನೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪ್ರೀಮಿಯಂ ರಹಿತ 50 ಲಕ್ಷ ರೂ. ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ನಿಂದ ವಾರ್ಷಿಕ 885 ರೂ. ಪ್ರೀಮಿಯಂ (ನೌಕರರಿಂದ) ಪಾವತಿ ಮೇರೆಗೆ 50 ಲಕ್ಷ ರೂ.ವಿಮೆ ಒಳಗೊಂಡಿರುತ್ತದೆ.
ಸಿಬಂದಿ ಕರ್ತವ್ಯದಲ್ಲಿದ್ದಾಗ ಅಥವಾ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿ ಉಂಟಾಗುವ ಅಪಘಾತಗಳಿಗೂ ಈ ಸೌಲಭ್ಯ ಅನ್ವಯಿಸುತ್ತದೆ. ಶಾಂತಿನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಂಗಳೂರು ಕೇಂದ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಚಾಲಕ ಜಿ.ವಿ.ಚಲಪತಿ ಮತ್ತು ಹಾಸನ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿ.ಎನ್.ನಾಗರಾಜು ಅವರ ಕುಟುಂಬದವರಿಗೆ ಅಪಘಾತ ಪರಿಹಾರ ವಿಮಾ ಮೊತ್ತ ತಲಾ 1 ಕೋಟಿ ರೂ.ಚೆಕ್ ವಿತರಿಸಿ ಸಾಂತ್ವನ ಹೇಳಿದರು.
ಇತರೆ ಸಾರಿಗೆ ಸಂಸ್ಥೆಗಳಲ್ಲಿ ಈ ಯೋಜನೆ ಜಾರಿ: ಈ ವೇಳೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮೃತಪಟ್ಟ ಸಿಬಂದಿಯನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಅವರ ಕುಟುಂಬಗಳ ಭದ್ರತೆಗಾಗಿ ನಿಗಮ ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆ ನೌಕರರಿಗೆ ಬಹಳ ಉಪಯುಕ್ತವಾಗಿದೆ. ಈ ಯೋಜನೆಯನ್ನು ಶೀಘ್ರದಲ್ಲೇ ಇತರ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸುವುದಾಗಿ ಹೇಳಿದರು.
ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮಾತನಾಡಿ, ಅಪಘಾತದಲ್ಲಿ ಮಡಿದ ಕುಟುಂಬಸ್ಥರಿಗೆ ಸಚಿವರ ಆದೇಶದಂತೆ ಕೂಡಲೇ ಅನುಕಂಪ ಆಧಾರದ ಮೇಲೆ ಕೆಲಸ ನೀಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಆಪಘಾತ ಎಲ್ಲಿ ಸಂಭವಿಸಿತ್ತು?
ಕಳೆದ ಜ.29ರಂದು ಕೆಎಸ್ಸಾರ್ಟಿಸಿ ಬೆಂಗಳೂರು ಕೇಂದ್ರ ವಿಭಾಗದಲ್ಲಿ ಚಾಲನಾ ಸಿಬಂದಿ ಜಿ.ವಿ.ಚಲಪತಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಫಘಾತ ಸಂಭವಿಸಿ ಮೃತಪಟ್ಟಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಫೆ.2ರಂದು ಹಾಸನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿ.ಎನ್.ನಾಗರಾಜು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆದು ಕೊನೆಯುಸಿರೆಳೆದಿದ್ದರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.