ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ರೂ. ಬಿಡುಗಡೆ

-ಶಾಸಕರ ಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ ಭರವಸೆ

Team Udayavani, Jul 21, 2023, 7:47 AM IST

ARRECANUT

ಬೆಂಗಳೂರು: ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್‌ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಅಡಕೆ ಸಹಕಾರ ಸಂಘ ಹಾಗೂ ಸಹಕಾರ ಮಹಾಮಂಡಳವು ಗುರುವಾರ ಬೆಂಗಳೂರಿನಲ್ಲಿ ಆಯೋಜಿಸಿದ್ದ ಅಡಕೆ ಬೆಳೆಯುವ ಪ್ರದೇಶಗಳ ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಅಡಕೆ ಸೇರಿ ಹಲವು ರೀತಿಯ ಬೆಳೆಗಾರರು ರಾಜ್ಯದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅನೇಕ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಸಿಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ, ಭೇದಭಾವ ಮರೆತು ಹೋರಾಟ ಮಾಡಬೇಕಿದೆ ಎಂದರು. ಅಡಕೆ ದಾಸ್ತಾನು ಮಾಡಲು ಗೋದಾಮುಗಳಿಗೆ ಬಾಡಿಗೆ ರಿಯಾಯಿತಿ ನೀಡಲು ಸರ್ಕಾರ ಸಿದ್ಧವಿದೆ. ಅದೇ ರೀತಿ ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಅಡಕೆ ಕಾರ್ಯಪಡೆ ರಚನೆಗೆ ಒತ್ತಾಯ: ಮಲೆನಾಡು, ಕರಾವಳಿ ಹಾಗೂ ಬಯಲುಸೀಮೆಯ ಹಲವು ಭಾಗಗಳಲ್ಲಿ ಅಡಕೆ ಬೆಳೆಯಲಾಗುತ್ತಿದ್ದು, ರೈತರ ಆರ್ಥಿಕ ಶಕ್ತಿಯಾಗಿರುವ ಅಡಕೆ ಬೆಳೆ ಇಂದು ಹತ್ತು ಹಲವು ಸಂಕಷ್ಟಗಳನ್ನು ಎದುರಿಸುತ್ತಿದೆ. ರಾಜ್ಯ ಅಡಕೆ ಬೆಳೆಗಾರರ ಹಾಗೂ ಅಡಕೆ ಬೆಳೆಯ ಹಿತರಕ್ಷಣೆ ಕಾಯುವ ಸಲುವಾಗಿ ಹಿಂದೆ ನಮ್ಮ ಸರ್ಕಾರ ಅಡಕೆ ಕಾರ್ಯಪಡೆ ರಚಿಸಿತ್ತು. ಅದನ್ನು ಪುನಃ ರಚನೆ ಮಾಡಿ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದರು.

ಸಭೆಯಲ್ಲಿದ್ದ ಜನಪ್ರತಿನಿಧಿಗಳು ಇದನ್ನು ಬೆಂಬಲಿಸಿದರಲ್ಲದೆ, ಈ ಹಿಂದೆ ಅಡಕೆಯು ಆರೋಗ್ಯಕ್ಕೆ ಹಾನಿಕರ ಎಂಬುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಇದ್ದಾಗ ಹಲವಾರು ಸಂಶೋಧನೆಗಳು ನಡೆದಿವೆ. ಕ್ಯಾಂಪ್ಕೋ ಸಂಸ್ಥೆಯು ಸಿಪಿಸಿಆರ್‌ಎಂ ಮೂಲಕ ಸಂಶೋಧನೆ ನಡೆಸಿದ ವರದಿಯನ್ನು ಅಂದಿನ ಆರೋಗ್ಯ ಮಂತ್ರಿ ಜೆ.ಪಿ. ನಡ್ಡಾ ಅವರಿಗೆ ಸಲ್ಲಿಸಲಾಗಿತ್ತು. ಅದರ ಆಧಾರದ ಮೇಲೆಯೇ ಕಾರ್ಯಪಡೆ ಕೂಡ ರಚನೆಯಾಗಿತ್ತು. ಸುಪ್ರೀಂಕೋರ್ಟ್‌ನಲ್ಲಿದ್ದ ಪ್ರಕರಣವನ್ನು ಸರಿಯಾದ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕೂ ನೆರವಾಗುತ್ತಿತ್ತು ಎಂದು ಜನಪ್ರತಿನಿಧಿಗಳು ಸಭೆಗೆ ಮನವರಿಕೆ ಮಾಡಿದರು.

ಇದೇ ವೇಳೆ ಎಲೆಚುಕ್ಕೆ ರೋಗ, ಅಡಕೆ ಆಮದಿನಿಂದ ಸ್ಥಳೀಯ ಅಡಕೆ ಬೆಳೆಗಾರರ ಮೇಲಾಗುತ್ತಿರುವ ಆರ್ಥಿಕ ದುಷ್ಪರಿಣಾಮ, ಅಡಕೆ ಬೆಲೆ ಏರಿಳಿತ ಸಮಸ್ಯೆ ಸೇರಿ ಹಲವು ವಿಷಯಗಳ ಕುರಿತು ಚರ್ಚೆ ನಡೆಯಿತು. ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಮೇಲ್ಮನೆ ಸದಸ್ಯರಾದ ಪ್ರಾಣೇಶ್‌, ಪರಶುರಾಮ್‌ ಸಿದ್ದಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಸಭೆಯಲ್ಲಿ ವ್ಯಕ್ತವಾದ ಪ್ರಮುಖ ಬೇಡಿಕೆಗಳು
* ರಾಜ್ಯದ ಅಡಕೆ ಬೆಳೆ ಮತ್ತು ಬೆಳಗಾರರ ಹಿತರಕ್ಷಣೆಗಾಗಿ ಕಾರ್ಯಪಡೆಯನ್ನು ಪುನಃ ರಚಿಸಬೇಕು
* ಎಪಿಎಂಸಿ ಗೋದಾಮುಗಳಲ್ಲಿ ಅಡಕೆ ಸಂರಕ್ಷಿಸಿಡಲು ವಿಧಿಸಲಾಗುವ ದರವನ್ನು ಕಡಿತ ಮಾಡಬೇಕು
* ಬೆಳೆ ಸಂಶೋಧನೆಗಾಗಿ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು, ಸೆಸ್‌ ರಿಯಾಯಿತಿ ನೀಡಬೇಕು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.