Rain Update: ಕರಾವಳಿಯಲ್ಲಿ 10 ದಿನ ಭಾರೀ ಮಳೆ ಸಾಧ್ಯತೆ: KSNDMC ಮುನ್ನೆಚ್ಚರಿಕೆ
Team Udayavani, Jun 29, 2023, 7:11 AM IST
ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದುಕೊಂಡಿದ್ದು, ಕರಾವಳಿ ಭಾಗದ ಹಲವು ಕಡೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಬೆಳಗ್ಗೆ ಮಳೆಯಾಗಿತ್ತು. ಬಳಿಕ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದ್ದು, ಮೋಡದಿಂದ ಕೂಡಿದ ವಾತಾವರಣ ಇತ್ತು. ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬುಧವಾರ ಕೆಲವೆಡೆ ಉತ್ತಮ ಮಳೆಯಾಗಿದ್ದು, ಕಾಪು, ಹೆಬ್ರಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಶಂಕರನಾರಾಯಣ, ಕಾಪು, ಬೆಳ್ಮಣ್, ಅಜೆಕಾರು, ಕುಂದಾಪುರ, ಪರ್ಕಳ, ಸಿದ್ದಾಪುರ, ಪಡುಬಿದ್ರಿ, ಬೈಂದೂರು, ಮಲ್ಪೆ, ಮಣಿಪಾಲ ಭಾಗದಲ್ಲಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ಮಂಗಳವಾರ ತಡರಾತ್ರಿಯಿಂದ ಬುಧವಾರ ಮುಂಜಾನೆ ವರೆಗೆ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
ಮುಂಗಾರು ಬಿರುಸು ಪಡೆಯುವ ಸಾಧ್ಯತೆ ಇದ್ದು, ಮುಂದಿನ ಹತ್ತು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ನೆಚ್ಚರಿಕೆ ನೀಡಿದೆ.
ಜುಲೈ 2ರಿಂದ ಮಳೆ ಮತ್ತಷ್ಟು ಬಿರುಸು ಪಡೆಯುವ ನಿರೀಕ್ಷೆ ಇದೆ. ಕರಾವಳಿಯಲ್ಲಿ 40ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಸಮುದ್ರಕ್ಕೆ ಇಳಿಯಬಾರದು. ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಬೇಕಾದ ಆವಶ್ಯಕತೆಯನ್ನು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.
ಇಂದು ಆರೆಂಜ್ ಅಲರ್ಟ್
ರಾಜ್ಯ ಕರಾವಳಿ ಭಾಗದಲ್ಲಿ ಜೂ. 29ರ ಬೆಳಗ್ಗೆ 8.30ರ ವರೆಗೆ “ಆರೆಂಜ್ ಅಲರ್ಟ್” ಅನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ವೇಳೆ 115.6 ಮಿ.ಮೀ.ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಜೂ. 29 ಬೆಳಗ್ಗೆ 8.30ರಿಂದ ಜು. 3ರ ವರೆಗೆ ಎಲ್ಲೋ ಅಲರ್ಟ್ ಘೊಷಿಸಲಾಗಿದೆ. ಈ ವೇಳೆ 64.5 ಮಿ.ಮೀ.ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.