ಟ್ರ್ಯಾಕ್ಟರ್ ಟ್ರಾಲಿ-ಜೀಪ್ ಢಿಕ್ಕಿ; ಒಂದೇ ಕುಟುಂಬದ 10 ಮಂದಿ ಸಾವು; 8 ಮಂದಿಗೆ ಗಾಯ
Team Udayavani, Apr 19, 2022, 7:43 PM IST
ಜೈಪುರ: ಟ್ರ್ಯಾಕ್ಟರ್ ಟ್ರಾಲಿ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಸಾವನ್ನಪಿದ್ದು 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜುಂಜುನು ಎಂಬಲ್ಲಿ ಮಂಗಳವಾರ (ಎ.19) ಸಂಭವಿಸಿದೆ.
ಜುಂಜುನು-ಗುಧಾ ಗೋಡ್ಜಿ ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದು ಮತ್ತು 8 ಮಂದಿಗೆ ಗಾಯಗೊಂಡಿದ್ದಾರೆ ಎಂದು ಜುಂಜುನು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಮೋಹನ್ ಶರ್ಮಾ ಹೇಳಿದ್ದಾರೆ.
ಜೀಪ್ ನಲ್ಲಿ ಇದ್ದ ಪ್ರಯಾಣಿಕರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹಿಂತಿರುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಂಭೀರ ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನೂ ಓದಿ:ಕೃಷಿ ಸಚಿವರ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ಸಾಗುತ್ತಿದ್ದವರು ರಸ್ತೆ ಅಪಘಾತದಲ್ಲಿ ಸಾವು
ಸಂತಾಪ
ಈ ಅಪಘಾತದಲ್ಲಿ ಸಾವನ್ನಪ್ಪಿರುವ ಕುಟುಂಬಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟರ್ ನಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.