ಟೂರ್ ಪ್ಯಾಕೇಜ್ ಹೆಸರಿನಲ್ಲಿ 12 ಲಕ್ಷ ರೂ. ವಂಚನೆ: ಆರೋಪಿ ಬಂಧನ
Team Udayavani, Jul 13, 2023, 7:28 PM IST
ಪಣಜಿ: ಟೂರ್ ಪ್ಯಾಕೇಜ್ ಹೆಸರಿನಲ್ಲಿ 12 ಲಕ್ಷ ರೂಪಾಯಿ ದೋಚಿದ್ದ ಶಂಕಿತ ಥಾಣೆ-ಮಹಾರಾಷ್ಟ್ರದ ಯತೀನ್ ಶ್ರೀರಾಮ ಕೋಚೆ ಎಂಬ ಆರೋಪಿಯನ್ನು ಡಿಚೋಲಿ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಲೊಕೇಶನ್ ಆಧಾರದ ಮೇಲೆ ಪೊಲೀಸರು ಶಂಕಿತನನ್ನು ಥಾಣೆಯಲ್ಲಿ ಬಂಧಿಸಿದ್ದಾರೆ.
ಆರೋಪಿ ಕಳೆದ ಆರು ತಿಂಗಳಿನಿಂದ ನಾಪತ್ತೆಯಾಗಿದ್ದ. ಪ್ರತಿ ಬಾರಿಯೂ ಅವನು ಸ್ಥಳವನ್ನು ಬದಲಾಯಿಸುತ್ತಿದ್ದ. ಶಂಕಿತ ಆರೋಪಿ ಸಾಖಳಿಯಲ್ಲಿರುವ ಗುರುನಾಥ್ ವಾಮನ್ ನಾಯ್ಕ್ ಮತ್ತು ಆತನ ಗೆಳೆಯರಿಗೆ ಉತ್ತರ ಪ್ರದೇಶದಲ್ಲಿ ಟೂರ್ ಪ್ಯಾಕೇಜ್ ಆಯೋಜಿಸುವುದಾಗಿ ಆಮಿಷ ತೋರಿಸಿ 2.5 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದರು. ಹಣ ತೆಗೆದುಕೊಂಡ ನಂತರ ಆರೋಪಿ ನಾಪತ್ತೆಯಾಗಿದ್ದ.
ಮೋಸಹೋದ ಗುರುನಾಥ್ ನಾಯ್ಕ್ ಎಂಬುವರು ಡಿಚೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಂಕಿತ ವ್ಯಕ್ತಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಡಿ.17 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಮತ್ತು 507 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಶಂಕಿತನ ಜಾಡು ಹಿಡಿದಿದ್ದರು. ಶಂಕಿತನ ಮೊಬೈಲ್ ಲೊಕೇಶನ್ ಮಾಹಿತಿ ಪಡೆದ ಪೊಲೀಸರು ಡಿಚೋಲಿ ಉಪ ಪೊಲೀಸ್ ಅಧೀಕ್ಷಕ ಸಾಗರ್ ಎಕೋಸ್ಕರ್ ಮತ್ತು ಪೊಲೀಸ್ ಇನ್ಸ್‍ಪೆಕ್ಟರ್ ರಾಹುಲ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಆತನನ್ನು ಬಂಧಿಸಿದ್ದಾರೆ. ಕಾನ್‍ಸ್ಟೆಬಲ್‍ಗಳಾದ ಲಕ್ಷ್ಮಣ್ ಘಾಡಿ ಮತ್ತು ಲಕ್ಷ್ಮಣ್ ನಾಯ್ಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪೊಲೀಸ್ ಪೇದೆ ಲಕ್ಷ್ಮಣ್ ಘಾಡಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.