![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 26, 2020, 11:14 AM IST
ಮುಂಬೈ:ಕುಸಿದು ಬಿದ್ದಿದ್ದ ಐದು ಅಂತಸ್ತಿನ ಕಟ್ಟಡದ ಅಡಿಯಲ್ಲಿ ಸಿಲುಕಿದ್ದವರ ರಕ್ಷಣೆ ಕಾರ್ಯಾಚರಣೆ ಸತತ 36 ಗಂಟೆಗಳಿಂದ ನಡೆಯುತ್ತಿದ್ದು ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಮಂಗಳವಾರ ರಕ್ಷಣಾ ತಂಡದ ಕಾರ್ಯಾಚರಣೆಯಲ್ಲಿ ನಾಲ್ಕು ವರ್ಷದ ಮಗು ಹಾಗೂ 64 ವರ್ಷದ ಮಹಿಳೆಯನ್ನುಎನ್ ಡಿಆರ್ ಎಫ್ ತಂಡ ರಕ್ಷಣೆ ಮಾಡಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿತ್ತು ಇನ್ನು ಹಲವಾರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯ ಮುಂದುವರೆದಿದೆ.
ರಾಯ್ ಗಢ್ ದಲ್ಲಿ ಐದು ಅಂತಸ್ತಿನ ಕಟ್ಟಡದಲ್ಲಿ 41 ಫ್ಲ್ಯಾಟ್ಸ್ ಇದ್ದು, 85 ಮಂದಿ ವಾಸವಾಗಿದ್ದರು ಎನ್ನಲಾಗಿದೆ ಆದರೆ ಕಟ್ಟಡ ದಿಧೀರನೇ ಕುಸಿದು ಬೀಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಈ ಕಾರಣದಿಂದಲೂ ಕಟ್ಟಡ ಕುಸಿದು ಬಿದ್ದಿರಬಹುದು ಎಂಬ ಶಂಶಯವೂ ಇದೆ.
ಸೋಮವಾರ ಸಂಜೆ ರಾಯ್ ಗಢ ಜಿಲ್ಲೆಯ ಕಾಜಲ್ ಪುರ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಸುಮಾರು 50 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿತ್ತು.
ಕಟ್ಟಡ ಕುಸಿತ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಹೇಳಿದ್ದು. ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.