ಆಗಷ್ಟ್ ನಲ್ಲಿ ಉದ್ಯೋಗ ಕಳೆದುಕೊಂಡ 15 ಲಕ್ಷ ಮಂದಿ ಭಾರತೀಯರು.! : ಸಿಎಂಐಇ ಹೇಳಿದ್ದೇನು.?
Team Udayavani, Sep 4, 2021, 11:40 AM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಔಪಚಾರಿಕ ಹಾಗೂ ಅನೌಪಚಾರಿಕ ಕ್ಷೇತ್ರಗಳನ್ನು ಒಳಗೊಂಡು ಭಾರತದಲ್ಲಿ ಕಳೆದ ತಿಂಗಳಿನಲ್ಲಿ (ಆಗಷ್ಟ್ ) ದೇಶದಾದ್ಯಂತ 15 ಲಕ್ಷ ಮಂದಿ ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಮಾಹಿತಿ ನೀಡಿದೆ.
ಜುಲೈ ತಿಂಗಳಿನಲ್ಲಿ ಶೇಕಡಾ. 6.95 ರಷ್ಟಿದ್ದ ರಾಷ್ಟ್ರೀಯ ನಿರುದ್ಯೋಗ ದರವು ಆಗಷ್ಟ್ ತಿಂಗಳಲ್ಲಿ ಶೇಕಡಾ 8. 32 ಕ್ಕೆ ಹೆಚ್ಚಳವಾಗಿದೆ. ಜುಲೈ ತಿಂಗಳಿನಲ್ಲಿ 39.93 ಕೋಟಿಯಷ್ಟು ಇದ್ದ ಉದ್ಯೋಗಿಗಳ ಸಮಸ್ಯೆ ಆಗಷ್ಟ್ ತಿಂಗಳಿನಲ್ಲಿ 39.77 ಕೋಟಿ ಆಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಪಂಜ್ ಶೀರ್ ತಾಲಿಬಾನ್ ಗೆ : ಮನ ಬಂದಂತೆ ಗುಂಡು ಹಾರಿಸಿ ಸಂಭ್ರಮ : ಹಲವರು ಗಂಭೀರ ಗಾಯ.!
ಗ್ರಾಮೀಣ ಭಾರತದಲ್ಲಿ ಸುಮಾರು 13 ಲಕ್ಷ ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದು, ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೆ ಏರಿದೆ. ಮಾತ್ರವಲ್ಲದ, ನಗರ ಪ್ರದೇಶಗಳಲ್ಲಿ ಜುಲೈ ತಿಂಗಳಲ್ಲಿ ನಿರುದ್ಯೋಗ ದರ ಶೇಕಡಾ 8.3 ರಷ್ಟಿದ್ದಿತ್ತು, ಆದರೇ, ಆಗಷ್ಟ್ ಮುಗಿಯುವುದರೊಳಗೆ ಅದು ಶೇಕಡಾ 9.78 ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದೆ.
ಇನ್ನು, ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ ಇದೇ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ‘ಸ್ನೇಹಿತರಿಗೆ ಸಂಬಂಧವಲ್ಲದ’ ವ್ಯಾಪಾರ ಅಥವಾ ಉದ್ಯೋಗವನ್ನು ಕೇಂದ್ರ ಸರ್ಕಾರ ಉತ್ತೇಜಿಸುವುದಿಲ್ಲ ಅಥವಾ ಬೆಂಬಲಿಸುವುದಿಲ್ಲ. ಆತ್ಮ ನಿರ್ಭರದ ನೆಪದಲ್ಲಿ ದೇಶವಾಸಿಗಳನ್ನು ಸಂಕಷ್ಟಕ್ಕೆ ದೂಡಿದೆ ಎಂದಿದ್ದಲ್ಲದೇ, ಆಗಸ್ಟ್ ನಲ್ಲಿ 15 ಲಕ್ಷ ಜನರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂಬ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ (ಸಿಎಂಐಇ) ದತ್ತಾಂಶ ಆಧರಿಸಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ಪ್ರಕಟಿಸಿರುವ ವರದಿಯ ತುಣುಕೊಂದನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದರು. ಮಾತ್ರವಲ್ಲದೇ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯೋಗಕ್ಕೆ ಮಾರಕ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.
ಇದನ್ನೂ ಓದಿ : ಸಭೆ ಸಮಾರಂಭಗಳಿಗೆ ನಿರ್ಬಂಧ ಹಾಕಲು ನಿಯಮ ಜಾರಿ: ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.