150 ಸೆ.ಮೀ. ಉದ್ದದ ಆನೆ ದಂತಗಳ ಮಾರಾಟ ಯತ್ನ: ಮೂವರ ಸೆರೆ


Team Udayavani, Mar 20, 2022, 12:35 PM IST

9danta

ಬೆಂಗಳೂರು: ಕೋಟ್ಯಂತರ ರೂ. ಮೌಲ್ಯದ ಆನೆ ದಂತಗಳನ್ನು ಮಾರಾಟಕ್ಕೆ ಯತ್ನಿಸಿದ ಮೂವರನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ.

ಹಾಸನದ ವೀರಾಪುರ ಗ್ರಾಮದ ಚಂದ್ರೇಗೌಡ (46), ಹಾವೇರಿಯ ಬಂಕಾಪುರದ ಸೋಮಲಿಂಗಪ್ಪ ಕೊಡದ್‌ (41) ಹಾಗೂ ಬಸವನಾಳದ ಪ್ರವೀನ್‌ ಗುಳೇದ್‌ (24) ಬಂಧಿತರು.

ಆರೋಪಿಗಳಿಂದ 29 ಕೆ.ಜಿ. ತೂಕದ 150 ಸೆಂ.ಮೀ. ಹಾಗೂ 125 ಸೆಂ.ಮೀ. ಉದ್ದವಿರುವ ಎರಡು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಬನಶಂಕರಿಯ 3ನೇ ಹಂತದ 7ನೇ ಮುಖ್ಯ ರಸ್ತೆಯ ಬಿಟಿಎಲ್‌ ವಿದ್ಯಾವಾಹಿನಿ ಸ್ಕೂಲ್‌ ಗೇಟ್‌ ಬಳಿ ಟಾಟಾ ಇಂಡಿಕಾ ಕಾರಿನಲ್ಲಿ 150 ಸೆ.ಮೀ. ಉದ್ದದ 16 ಕೆ.ಜಿ. ಹಾಗೂ 125 ಸೆಂ. ಮೀ. ಉದ್ದದ 13 ಕೆ.ಜಿ.ಯ ಎರಡು ಆನೆ ದಂತಗಳನ್ನು ಮಾರಾಟಕ್ಕೆ ಯತ್ನಿಸಿದ್ದರು. ಅದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಣಾಧಿಕಾರಿ ಜನಾರ್ದನ್‌ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ದಂತಗಳನ್ನು ವಶಕ್ಕೆ ಪಡೆದುಕೊಂಡಿದೆ.

ಆರೋಪಿಗಳ ವಿರುದ್ಧ ವನ್ಯಜೀವ ಸಂರಕ್ಷಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಸಕಲೇಶಪುರ ಸಮೀಪದಲ್ಲಿರುವ ಕಾಡಿನಿಂದ ಆನೆ ದಂತಗಳನ್ನು ತಂದಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಸುಮಾರು 40-45 ವರ್ಷದ ಆನೆಯ ದಂತಗಳು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ:ಫುಟ್ ಬಾಲ್ ಪಂದ್ಯದ ವೇಳೆ ಕುಸಿದ ಗ್ಯಾಲರಿ: ನೂರಕ್ಕೂ ಅಧಿಕ ಮಂದಿಗೆ ಗಾಯ

ಆನೆ ಕೊಂದು ಇವರೇ ತಂದಿದ್ದಾರೆಯೇ? ಅಥವಾ ಬೇರೆಯವರಿಂದ ಖರೀದಿಸಿದ್ದಾರೆಯೇ? ಇಲ್ಲಿ ಯಾರಿಗೆ ಮಾರಾಟಕ್ಕೆ ಯತ್ನಿಸಿದ್ದರು? ಜತೆಗೆ ಪರಸ್ಪರ ಪರಿಚಯ ಹೇಗೆ? ಎಂಬ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.