16 ವರ್ಷದ ಬಾಲಕಿ ಅಪಹರಣ; ಕಾಮೋತ್ತೇಜಕ ಇಂಜೆಕ್ಷನ್ ನೀಡಿ ಎಂಟು ವರ್ಷ ಅತ್ಯಾಚಾರ!
ಅಭಿಷೇಕ್ ಮತ್ತು ಅವರ ತಂಡ ದೆಹಲಿ ಮತ್ತು ಉತ್ತರಪ್ರದೇಶಕ್ಕೆ ತೆರಳಿ ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
Team Udayavani, Jun 8, 2021, 5:15 PM IST
ಮಹಾರಾಷ್ಟ್ರ: ಮುಂಬಯಿಯ ಅಂಧೇರಿ ಪ್ರದೇಶದಿಂದ 16 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಗೆ ಕಾಮೋತ್ತೇಜಕ ಚುಚ್ಚುಮದ್ದು ನೀಡಿ ಸತತ ಎಂಟು ವರ್ಷಗಳ ಕಾಲ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ;ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಕಾರಣವಾದ ಭೂ ಹಗರಣ: ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಉದ್ಯಮಿಯ ಮಗಳನ್ನು ಅಪಹರಿಸಿದ್ದ ನೆರೆಹೊರೆಯ ವ್ಯಕ್ತಿಯೊಬ್ಬ ಕಾಮೋತ್ತೇಜಕದ ಮಾತ್ರೆ ಮತ್ತು ಚುಚ್ಚುಮದ್ದನ್ನು ಬಲವಂತವಾಗಿ ನೀಡಿ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ವಿಷಯ ಆ ವ್ಯಕ್ತಿಯ ಪತ್ನಿಗೂ ತಿಳಿದಿದ್ದು, ಪ್ರಕರಣದಲ್ಲಿ ಆಕೆಯನ್ನು ಬಂಧಿಸಲಾಗಿದೆ. ಆದರೆ ಆರೋಪವನ್ನು ದಂಪತಿ ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯ ಚಿಕ್ಕಪ್ಪ ಹಾಗೂ ಆತನ 19 ವರ್ಷದ ಮಗ ಶಾಮೀಲಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಸ್ಥಳೀಯ ಅಂಬೋಲಿ ಪೊಲೀಸರು 27 ಪುಟಗಳಷ್ಟು ಟಿಪ್ಪಣಿಯನ್ನು ವಶಪಡಿಸಿಕೊಂಡಿದ್ದು, ಅದನ್ನು ಬಾಲಕಿ ತನ್ನ ಪೋಷಕರಿಗೆ ಬರೆದಿದ್ದಳು ಎಂದು ವರದಿ ವಿವರಿಸಿದೆ.
ಯುವತಿಯ ತಂದೆ ನೀಡಿದ್ದ ಕಿಡ್ನಾಪ್ ದೂರಿನ ಆಧಾರ ಮೇಲೆ ಡೆಪ್ಯುಟಿ ಪೊಲೀಸ್ ಕಮಿಷನರ್ ಅಭಿಷೇಕ್ ಮತ್ತು ಅವರ ತಂಡ ದೆಹಲಿ ಮತ್ತು ಉತ್ತರಪ್ರದೇಶಕ್ಕೆ ತೆರಳಿ ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.