ರಾಜ್ಯದಲ್ಲಿ ಸಾವಿರದ ಗಡಿ ದಾಟಿದ ಒಮಿಕ್ರಾನ್ ಪ್ರಕರಣಗಳು
Team Udayavani, Jan 27, 2022, 4:18 PM IST
ಬೆಂಗಳೂರು : ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳಿರುವ ರಾಜಧಾನಿಯಲ್ಲಿ ಇಂದು ಗುರುವಾರ ರೂಪಾಂತರಿಯ 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.
ಅರೋಗ್ಯ ಸಚಿವ ಡಾ.ಸುಧಾಕರ್ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇಂದು 185 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,115 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬುಧವಾರ 48,905 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು. ಬೆಂಗಳೂರು ನಗರದಲ್ಲೇ 22,427 ಪ್ರಕರಣಗಳು ವರದಿಯಾಗಿದ್ದವು. 39 ಸೋಂಕಿತರು ಸಾವನ್ನಪ್ಪಿದ್ದು, ಆ ಪೈಕಿ 9 ಮಂದಿ ಬೆಂಗಳೂರಿನವರಾಗಿದ್ದರು. ರಾಜ್ಯದ ಪಾಸಿಟಿವಿಟಿ ದರ 22.51% ಆಗಿದೆ.
ರಾಜ್ಯದಲ್ಲಿ 3,57,909 ಸಕ್ರಿಯ ಪ್ರಕರಣಗಳಿದ್ದು,ಬೆಂಗಳೂರಿನಲ್ಲಿ ಅತೀ ಹೆಚ್ಚು 2 ಲಕ್ಷದ 16 ಸಾವಿರ ಸಕ್ರಿಯ ಪ್ರಕರಣಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.