Nuke Plant;ಭಾರತದ ಮೊದಲ ದೇಶೀ ನಿರ್ಮಿತ ನ್ಯೂಕ್ಲಿಯರ್ ಘಟಕ ಕಾರ್ಯಾರಂಭ: ಪ್ರಧಾನಿ ಅಭಿನಂದನೆ
ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ
Team Udayavani, Sep 1, 2023, 12:37 PM IST
ನವದೆಹಲಿ: ಗುಜರಾತ್ ನ ಕಾಕ್ರಾಪರ್ ನಲ್ಲಿ ಭಾರತದ ಮೊದಲ ದೇಶಿ ನಿರ್ಮಿತ 700 ಮೆಗಾ ವ್ಯಾಟ್ ಸಾಮರ್ಥ್ಯದ ನ್ಯೂಕ್ಲಿಯರ್ ಇಂಧನ ಘಟಕ ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯಾರಂಭಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:Droupadi Murmu: ನೆಹರು ಸ್ಮಾರಕ ವಸ್ತುಸಂಗ್ರಹಾಲಯದ ಮರುನಾಮಕರಣಕ್ಕೆ ರಾಷ್ಟ್ರಪತಿ ಅನುಮೋದನೆ
ಕಾಕ್ರಾಪರ್ ಆಟೋಮಿಕ್ ಪವರ್ ಪ್ರಾಜೆಕ್ಟ್ (KAPP) ಜೂನ್ 30ರಂದು ವಾಣಿಜ್ಯ ಬಳಕೆಯ ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಇದೀಗ ನ್ಯೂಕ್ಲಿಯರ್ ಘಟಕ ಶೇ.90ರಷ್ಟ ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸುತ್ತಿರುವುದಾಗಿ ವರದಿ ತಿಳಿಸಿದೆ.
ಈ ಕುರಿತು X ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ” ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಗುಜರಾತ್ ನಲ್ಲಿ ದೇಶಿ ನಿರ್ಮಿತ 700 ಮೆಗಾ ವ್ಯಾಟ್ ಸಾಮರ್ಥ್ಯದ ಕಾಕ್ರಾಪರ್ ನ್ಯೂಕ್ಲಿಯರ್ ಪವರ್ ಪ್ಲ್ಯಾಂಟ್ ಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯಾಚರಿಸುತ್ತಿದ್ದು, ಇದಕ್ಕಾಗಿ ಶ್ರಮಿಸಿದ ನಮ್ಮ ವಿಜ್ಞಾನಿಗಳಿಗೂ ಹಾಗೂ ಇಂಜಿನಿಯರ್ಸ್ ಗಳಿಗೆ ಅಭಿನಂದನೆ ಸಲ್ಲಿಸುವುದಾಗಿ” ತಿಳಿಸಿದ್ದಾರೆ.
India achieves another milestone.
The first largest indigenous 700 MWe Kakrapar Nuclear Power Plant Unit-3 in Gujarat starts operations at full capacity.
Congratulations to our scientists and engineers.
— Narendra Modi (@narendramodi) August 31, 2023
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಇಂಡಿಯಾ ಲಿಮಿಟೆಡ್ ( NPCIL) ಎರಡು 700 ಮೆಗಾ ವ್ಯಾಟ್ ಸಾಮರ್ಥ್ಯದ, ಭಾರೀ ನೀರಿನ ಒತ್ತಡದ ರಿಯಾಕ್ಟರ್ ಗಳನ್ನು ಕಾಕ್ರಾಪರ್ ನಲ್ಲಿ ನಿರ್ಮಿಸಿದ್ದು, ಇದು ಎರಡು 220 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರಕ್ಕೆ ನೆಲೆಯಾಗಲಿದೆ ಎಂದು ವರದಿ ವಿವರಿಸಿದೆ.
ನ್ಯೂಕ್ಲಿಯರ್ ಪವರ್ ಕಾರ್ಪೋರೇಶನ್ ಇಂಡಿಯಾ ಲಿಮಿಟೆಡ್ ದೇಶಾದ್ಯಂತ 700 ಮೆಗಾ ವ್ಯಾಟ್ ಸಾಮರ್ಥ್ಯದ Pressurised heavy water reactorsಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದು, ಇದಕ್ಕೆ ಹಣಕಾಸು ನೆರವು ಮತ್ತು ಆಡಳಿತಾತ್ಮಕ ಅನುಮತಿಗಾಗಿ ಕಾಯುತ್ತಿರುವುದಾಗಿ ವರದಿ ತಿಳಿಸಿದೆ.
ಹರ್ಯಾಣದ ಗೋರಖ್ ಪುರ್, ಮಧ್ಯಪ್ರದೇಶದ ಚುಟ್ಕಾ, ರಾಜಸ್ಥಾನದ ಬನ್ಸಾವಾರಾ ಹಾಗೂ ಕರ್ನಾಟಕದ ಕೈಗಾ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ದೇಶೀ ನಿರ್ಮಿತ 10 ಪಿಎಚ್ ಡಬ್ಲ್ಯುಆರ್ ಎಸ್ ಘಟಕ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Airport: 2025ರ ಏಪ್ರಿಲ್ ನಲ್ಲಿ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ
JioHotstar domain: ಜಿಯೋ ಹಾಟ್‌ಸ್ಟಾರ್ ಡೊಮೈನ್ ನಮ್ಮದು: ದುಬೈ ಮಕ್ಕಳ ವಾದ!
Elon Musk: ಎಡಪಂಥೀಯರ ವಿಕಿಪೀಡಿಯಾಗೆ ದೇಣಿಗೆ ನೀಡಬೇಡಿ; ಮಸ್ಕ್
Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.