ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.08 ಲಕ್ಷ ಕೋವಿಡ್ ಪ್ರಕರಣ ಪತ್ತೆ, 4,157 ಮಂದಿ ಸಾವು
ತಮಿಳುನಾಡಿನಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.
Team Udayavani, May 26, 2021, 10:01 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.08 ಲಕ್ಷ ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,157 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಮೇ 26) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಯಾಸ್ ಚಂಡಮಾರುತ ಅಬ್ಬರ ಪ್ರಾರಂಭ; ಒಡಿಶಾ, ಬಂಗಾಳದಲ್ಲಿ ಭಾರೀ ಗಾಳಿ-ಮಳೆ
ಭಾರತದಲ್ಲಿ ಕೋವಿಡ್ ಸೋಂಕು ಎರಡನೇ ಅಲೆ ಹರಡಲು ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ 22.17 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಹೇಳಿದೆ.
ಕೋವಿಡ್ ಸೋಂಕಿನಿಂದ ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 3.11 ಲಕ್ಷಕ್ಕೆ ಏರಿಕೆಯಾಗಿದ್ದು, ಒಟ್ಟು ಕೋವಿಡ್ ಸೋಂಕು ಪ್ರಕರಣ 2.71 ಕೋಟಿಗೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೋವಿಡ್ 19 ಪ್ರಕರಣ ಇದ್ದಿದ್ದು, ಇದೀಗ ಪ್ರಕರಣಗಳ ಸಂಖ್ಯೆ ಇಳಿಕೆಯಾಗತೊಡಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.