ನೋಯ್ಡಾ: ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು
ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್ ಡಿಆರ್ ಎಫ್) ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
Team Udayavani, Aug 1, 2020, 9:01 AM IST
ನೋಯ್ಡಾ: ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನೋಯ್ಡಾದಲ್ಲಿ ಶನಿವಾರ(ಆಗಸ್ಟ್ 1-2020)ದಂದು ನಡೆದಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಸೆಕ್ಟರ್ 11ರಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಇದು ಖಾಸಗಿ ಸಂಸ್ಥೆಗೆ ಸೇರಿದ್ದಾಗಿದೆ ಎಂದು ವರದಿ ತಿಳಿಸಿದೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್ ಡಿಆರ್ ಎಫ್) ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಮೂವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶ್ರೀಪರ್ಣಾ ಗಂಗೂಲಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಘಟನೆಯಲ್ಲಿ ಸಾವನ್ನಪ್ಪಿದ್ದವರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.