Rin Update: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇನ್ನೂ 2 ದಿನ ಮಳೆ ಸಾಧ್ಯತೆ
Team Udayavani, May 27, 2023, 7:23 AM IST
ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಗುಡುಗು ಮಿಂಚಿನ ಸಾಧ್ಯತೆ ಇದೆ. ಇನ್ನು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
********
ಎಲ್ಲೆಲ್ಲಿ ಎಷ್ಟೆಷ್ಟು ಮಳೆ ?
ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ ) 5, ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ), ಕೊಣನೂರು (ಹಾಸನ ಜಿಲ್ಲೆ), ಹೊಸಪೇಟೆ (ವಿಜಯನಗರ ಜಿಲ್ಲೆ) ತಲಾ 4, ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ), ಮದ್ದೂರು (ಮಂಡ್ಯ ಜಿಲ್ಲೆ), ತುಮಕೂರು ತಲಾ 3, ಬುಕ್ಕಪಟ್ಟಣ (ತುಮಕೂರು ಜಿಲ್ಲೆ), ಹೊಸದುರ್ಗ (ಚಿತ್ರದುರ್ಗ ಜಿಲ್ಲೆ) ತಲಾ 2, ಹುಣಸೂರು (ಮೈಸೂರು ಜಿಲ್ಲೆ), ಮಧುಗಿರಿ (ತುಮಕೂರು ಜಿಲ್ಲೆ), ಎಚ್‌ಎಎಲ್ ವಿಮಾನ ನಿಲ್ದಾಣ (ಬೆಂಗಳೂರು ನಗರ ಜಿಲ್ಲೆ), ಚಿಕ್ಕಮಗಳೂರು, ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ), ಚಂದೂರಾಯನಹಳ್ಳಿ (ರಾಮನಗರ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.