2008ರ ಅಹಮದಾಬಾದ್ ಸರಣಿ ಸ್ಫೋಟ ಕೇಸ್: 38 ಆರೋಪಿಗಳಿಗೆ ಮರಣದಂಡನೆ ಶಿಕ್ಷೆ
ಅಹಮದಾಬಾದ್ ನ ವಿವಿಧೆಡೆ ಕೇವಲ 70 ನಿಮಿಷಗಳ ಅವಧಿಯಲ್ಲಿ 22 ಬಾಂಬ್ ಗಳನ್ನು ಸ್ಫೋಟಗೊಳಿಸಲಾಗಿತ್ತು.
Team Udayavani, Feb 18, 2022, 1:01 PM IST
ನವದೆಹಲಿ: 2008ರಲ್ಲಿ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 38 ಮಂದಿ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಹಾಗೂ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ (ಫೆ.18) ತೀರ್ಪನ್ನು ಪ್ರಕಟಿಸಿದೆ.
ಇದನ್ನೂ ಓದಿ:ಅಣ್ಣ-ತಂಗಿ ಅನೈತಿಕ ಸಂಬಂಧ; ಅಡ್ಡಿಯಾದ ತಾಯಿಯನ್ನೇ ಸಂಪ್ ಗೆ ತಳ್ಳಿ ಕೊಲೆ!
2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದಲ್ಲಿ 56 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಅಹಮದಾಬಾದ್ ನ ವಿಶೇಷ ಕೋರ್ಟ್ ಫೆ.8ರಂದು 49 ಮಂದಿಯನ್ನು ದೋಷಿ ಎಂದು ತೀರ್ಪು ನೀಡಿತ್ತು.
2008ರ ಜುಲೈ 26ರಂದು ಅಹಮದಾಬಾದ್ ನ ವಿವಿಧೆಡೆ ಕೇವಲ 70 ನಿಮಿಷಗಳ ಅವಧಿಯಲ್ಲಿ 22 ಬಾಂಬ್ ಗಳನ್ನು ಸ್ಫೋಟಗೊಳಿಸಲಾಗಿತ್ತು. ಇತ್ತೀಚೆಗಿನ ವರ್ಷಗಳಲ್ಲಿ ನಡೆದ ಅತೀ ದೀರ್ಘಾವಧಿ ವಿಚಾರಣೆಯ ಕ್ರಿಮಿನಲ್ ಪ್ರಕರಣಗಳಲ್ಲಿ ಇದು ಒಂದಾಗಿದೆ ಎಂದು ವರದಿ ವಿವರಿಸಿದೆ.
ಸುಮಾರು 13 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ವಿಶೇಷ ಕೋರ್ಟ್ ಫೆ.8ರಂದು 49 ಆರೋಪಿಗಳನ್ನು ದೋಷಿ ಎಂದು ತೀರ್ಪು ನೀಡಿ, 28 ಮಂದಿಯನ್ನು ಖುಲಾಸೆಗೊಳಿಸಿತ್ತು. ಹರ್ಕತ್ ಅಲ್ ಇಸ್ಲಾಮಿ ಉಗ್ರಗಾಮಿ ಸಂಘಟನೆಯ ಈ ಸರಣಿ ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.