ಅಸ್ಸಾಂ: ಕೋವಿಡ್ ರೋಗಿ ಸಾವಿನ ಬಳಿಕ ವೈದ್ಯರ ಮೇಲೆ ಹಲ್ಲೆ: 24 ಆರೋಪಿಗಳ ಬಂಧನ
ನ್ಯಾಯ ಒದಗಿಸಿಕೊಡುವ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿ ಶರ್ಮಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Team Udayavani, Jun 2, 2021, 3:50 PM IST
ನವದೆಹಲಿ: ಕೋವಿಡ್ 19 ರೋಗಿ ಸಾವನ್ನಪ್ಪಿದ ನಂತರ ಆಕ್ರೋಶಗೊಂಡ ಜನರು ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಮಂದಿಯನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಬುಧವಾರ (ಜೂನ್ 02) ತಿಳಿಸಿದ್ದಾರೆ.
ಇದನ್ನೂ ಓದಿ:ನಡುರಸ್ತೆಯಲ್ಲಿ ವಾಹನ ತಡೆದು ಚಾಲಕನನ್ನು ಬೆದರಿಸಿ 30 ಸಾವಿರ ಲೂಟಿ, ಪರಾರಿಯಾದ ಅಪರಿಚಿತರು
ಉದಾಲಿ ಕೇರ್ ಸೆಂಟರ್ ನಲ್ಲಿ ಡಾ.ಸಿವ್ಜ್ ಕುಮಾರ್ ಸೇನಾಪತಿ ಅವರ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ಶಾಮೀಲಾದ ವ್ಯಕ್ತಿಗಳಿಗೆ ಶೀಘ್ರವೇ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಬಲವಾದ ಆರೋಪಪಟ್ಟಿಯನ್ನು ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವೈದ್ಯರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆಯಲ್ಲಿ ಶಾಮೀಲಾದ 24 ಆರೋಪಿಗಳನ್ನು ಬಂಧಿಸಿದ್ದು, ಶೀಘ್ರವೇ ಆರೋಪಪಟ್ಟಿ ಕೋರ್ಟ್ ಗೆ ಸಲ್ಲಿಸಲಾಗುವುದು. ನಾನು ಈ ಪ್ರಕರಣವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದು, ನ್ಯಾಯ ಒದಗಿಸಿಕೊಡುವ ಭರವಸೆ ನೀಡಿರುವುದಾಗಿ ಮುಖ್ಯಮಂತ್ರಿ ಶರ್ಮಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.