ಒಂದು ಡೋಸ್‌ಗೆ 250 ರೂ. :ಸೋಮವಾರ 2ನೇ ಹಂತದ ಲಸಿಕೆ ವಿತರಣೆ
Team Udayavani, Feb 28, 2021, 7:00 AM IST
ಹೊಸದಿಲ್ಲಿ: ಸೋಮವಾರ 2ನೇ ಹಂತದ ಲಸಿಕೆ ವಿತರಣೆ ಆರಂಭವಾಗಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಗೆ ದರ ನಿಗದಿಪಡಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಪ್ರತೀ ಡೋಸ್ ಲಸಿಕೆಗೆ 250 ರೂ.ಗಳಾಗಿದ್ದು, ಎರಡು ಡೋಸ್‌ಗಳಿಗೆ 500 ರೂ. ಆಗಲಿದೆ.
ಮಾ. 1ರಿಂದ 60 ವರ್ಷ ದಾಟಿದ ಹಿರಿಯರು ಮತ್ತು ಇತರ ರೋಗಗಳಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತೀ ಡೋಸ್‌ಗೆ 250 ರೂ. ನೀಡಿ ಪಡೆಯಬೇಕಿದೆ. ಈ ದರ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ನೋಂದಣಿ ಹೇಗೆ?
ಫಲಾನುಭವಿಗಳು ಕೋವಿನ್ 2.0 ಡೌನ್‌ಲೋಡ್ ಮಾಡಿಕೊಳ್ಳಬೇಕು. 45 ಮತ್ತು 60 ವರ್ಷ ದಾಟಿದವರು ವೈದ್ಯರಿಂದ ಪ್ರಮಾಣ ಪತ್ರ ಪಡೆದು ಕೋವಿನ್ 2.0ನಲ್ಲಿ ಅಪ್‌ಲೋಡ್ ಮಾಡಬೇಕು. ಇದಕ್ಕೆ ಸಹಿ ಮಾಡಿ ಲಸಿಕೆ ಕೇಂದ್ರಕ್ಕೆ ತರಬೇಕು. ಆರೋಗ್ಯ ಸೇತುವಿನಲ್ಲೂ ನೋಂದಣಿ ಮಾಡಿಕೊಳ್ಳಬಹುದು. ಬಳಿಕ ಈ ಆ್ಯಪ್ ಹತ್ತಿರದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಪಟ್ಟಿಯನ್ನು ತೋರಿಸುತ್ತದೆ. ಇದನ್ನು ಆರಿಸಿಕೊಂಡು ಲಸಿಕೆ ಪಡೆಯಲು ಹೋಗಬಹುದು.
268 ಆರೋಗ್ಯ ಕೇಂದ್ರ
ರಾಜ್ಯದಲ್ಲಿ ಸಾರ್ವಜನಿಕರಿಗೆ ಕೊರೊನಾ ಲಸಿಕೆ ವಿತರಣೆಗೆ ಆರೋಗ್ಯ ಇಲಾಖೆ ಸಜ್ಜಾಗಿದ್ದು, 268 ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಎಲ್ಲ ತಾಲೂಕು, ಜಿಲ್ಲಾಸ್ಪತ್ರೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ -ಸೋಮವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಲಸಿಕೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಎಲ್ಲ ದಿನವೂ ಲಭ್ಯ.
ಎಲ್ಲ ಆಸ್ಪತ್ರೆ ಬಳಸಿಕೊಳ್ಳಿ
2ನೇ ಹಂತದಲ್ಲಿ 10 ಕೋಟಿ ಮಂದಿಗೆ ಲಸಿಕೆ ನೀಡಬೇಕಾಗಿದೆ. ಹೀಗಾಗಿ ಎಲ್ಲ ರೀತಿಯ ಸರಕಾರಿ ಆಸ್ಪತ್ರೆಗಳನ್ನು ಬಳಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.