ಪ್ರತ್ಯೇಕ ಕಾರ್ಯಾಚರಣೆ : ಕಾಶ್ಮೀರದಲ್ಲಿ ಮೂವರು ಶಂಕಿತ ಉಗ್ರರ ಬಂಧನ
ವಾಹನವನ್ನು ತಡೆದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು...
Team Udayavani, Oct 31, 2022, 4:41 PM IST
ಶ್ರೀನಗರ : ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಮೂವರು ಶಂಕಿತ ಉಗ್ರರನ್ನು ಬಂಧಿಸಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
“ಚಾಕ್ ಕೆಲ್ಲರ್ ಪ್ರದೇಶದಲ್ಲಿ ಇಬ್ಬರು ಉಗ್ರರ ಉಪಸ್ಥಿತಿಯ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ಬಂದ ಮಾಹಿತಿಯ ಆಧಾರದ ಮೇಲೆ, ಭಾನುವಾರ ಸಂಜೆ ಜಂಟಿ ಮೊಬೈಲ್ ವಾಹನ ಚೆಕ್ ಪೋಸ್ಟ್ (ಎಂವಿಸಿಪಿ) ಸ್ಥಾಪಿಸಲಾಯಿತು” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ವಾಹನವನ್ನು ತಡೆದಾಗ ಅದರಲ್ಲಿದ್ದವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು.ಆದರೆ, ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.
ಬಂಧಿತರು ಪುಲ್ವಾಮಾದ ದ್ರಾಬ್ಗಾಮ್ ನಿವಾಸಿಗಳಾದ ಗೌಹರ್ ಮಂಜೂರ್ ಮತ್ತು ಅಕಿಬ್ ಹುಸೇನ್ ನಂದಾ ಎಂದು ಗುರುತಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಮತ್ತೊಂದು ಕಾರ್ಯಾಚರಣೆಯಲ್ಲಿ, ಶೋಪಿಯಾನ್‌ನ ಮೊಹಂದಪುರದಲ್ಲಿ ಶಂಕಿತ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿದ್ದಾರೆ. ಬಂಧಿತರ ವಶದಿಂದ ಒಂದು ಪಿಸ್ತೂಲ್ ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.