ಕಾಂಗ್ರೆಸ್‌ನ 3 ಟ್ರಸ್ಟ್‌ಗಳಿಗೆ ತನಿಖೆಯ ಬಿಸಿ
Team Udayavani, Jul 9, 2020, 5:45 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕರ ನೇತೃತ್ವದ ಮೂರು ಟ್ರಸ್ಟ್‌ಗಳ ವಿರುದ್ಧ ತನಿಖೆಗೆ ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕಾಗಿ ಅಂತರ್ ಸಚಿವಾಲಯ ಸಮಿತಿ ರಚಿಸಲಾಗಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮುಖ್ಯಸ್ಥರಾಗಿರುವ ರಾಜೀವ್ ಗಾಂಧಿ ಫೌಂಡೇಶನ್‌ಗೆ ಚೀನ ಮೊದ ಲಾದ ದೇಶಗಳಿಂದ ಅಪಾರ ಪ್ರಮಾಣ ದಲ್ಲಿ ಅಕ್ರಮ ದೇಣಿಗೆ ಹರಿದು ಬಂದ ಆರೋಪಗಳ ಹಿನ್ನೆಲೆಯಲ್ಲಿ ಸರಕಾರ ತನಿಖೆಗೆ ಮುಂದಾ ಗಿದೆ ಎಂದು ಕೇಂದ್ರ ಗೃಹ ಇಲಾಖೆ ಬುಧವಾರ ತಿಳಿಸಿದೆ.
ಹಲವು ಕಾಯ್ದೆಗಳಡಿ ತನಿಖೆ
ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೆಬಲ್ ಟ್ರಸ್ಟ್ ಹಾಗೂ ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್‌ಗಳಿಗೆ ಬಂದಿರುವ ಹಣವನ್ನು ಹಲವು ಕಾಯ್ದೆಗಳ ಅಡಿಯಲ್ಲಿ ತನಿಖೆ ನಡೆಸುವ ಅನಿವಾರ್ಯವಿದೆ. ಹಾಗಾಗಿ ಅಂತರ ಸಚಿವಾಲಯಗಳ ಮಟ್ಟದ ಸಮಿತಿ ರಚಿಸಲಾಗಿದೆ. ಜಾರಿ ನಿರ್ದೇಶನಾಲಯದ ಹೆಚ್ಚು ವರಿ ನಿರ್ದೇಶಕರು ಅದರ ಮುಖ್ಯಸ್ಥ ರಾಗ ಲಿದ್ದಾರೆ ಎಂದು ತಿಳಿಸಿದೆ.ಜೂ. 26ರಂದು ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಕಾಂಗ್ರೆಸ್ ನಾಯಕರು ಮುಖ್ಯಸ್ಥರಾಗಿರುವ ದತ್ತಿ ಸಂಸ್ಥೆಗಳಿಗೆ ವಿದೇಶಗಳಿಂದ ಅಕ್ರಮವಾಗಿ ಹಣ ಹರಿದುಬಂದಿದೆ.
ಈ ಹಣವನ್ನು ಕಾಂಗ್ರೆಸ್ ನಾಯಕರು ಏನು ಮಾಡಿದರು? ಯಾವ ಕಲ್ಯಾಣ ಕೆಲಸಗಳಿಗೆ ಖರ್ಚು ಮಾಡಿದರು ಎಂದು ಪ್ರಶ್ನಿಸಿದ್ದರು.
ದೇಣಿಗೆಗಳ ಬಗ್ಗೆ ವಿವರಣೆ ನೀಡಿದ್ದ ಅವರು, ರಾಜೀವ್ ಗಾಂಧಿ ದತ್ತಿ ಸಂಸ್ಥೆಗೆ ಚೀನ ಹಾಗೂ ಯೂರೋಪಿಯನ್ ಕಮಿಷನ್‌ನಿಂದ 2005-2009ರ ಅವಧಿಯಲ್ಲಿ ಪ್ರತಿ ವರ್ಷ ದೇಣಿಗೆ ನೀಡಲಾಗಿದೆ. ಲಕ್ಸೆಂಬರ್ಗ್‌ನಿಂದ 2006-09ರ ಅವಧಿಯಲ್ಲಿ ಪ್ರತಿ ವರ್ಷವೂ ದೇಣಿಗೆ ನೀಡಿದೆ. ಇದಲ್ಲದೆ ಹಲವು ವಿದೇಶಿ ಕಂಪೆನಿಗಳಿಂದ ಹೇರಳ ಹಣ ಬಂದಿದೆ ಎಂದು ಹೇಳಿದ್ದರು.
ಇದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಕ್ರಿಯಿಸಿ, ಮೋದಿ ಇಡೀ ಪ್ರಪಂಚ ತಮ್ಮ ಹಾಗೇ ಇದೆ ಎಂದು ತಿಳಿದಿದ್ದಾರೆ. ಯಾರು ಸತ್ಯಕ್ಕಾಗಿ ಹೋರಾಡಿದ್ದಾರೋ ಅವರನ್ನು ಅವಮಾನಿಸುವುದು ಅಥವಾ ಬೆದರಿಸುವುದು ಒಳ್ಳೆಯ ಲಕ್ಷಣವಲ್ಲ ಎಂಬುದನ್ನು ಅರಿತಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.